ETV Bharat / state

ಏನಿದು ಆಯುಷ್ಮಾನ್ ಭಾರತ್ ಯೋಜನೆ? ; ಅರ್ಹರು ಯಾರು? - ಎಬಿಎಆರ್ ಕೆ ಕಾರ್ಡ್

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತಿ ತಿಂಗಳು 1.80 ರಿಂದ 2 ಲಕ್ಷ ಮಂದಿಗೆ ಉಚಿತ ಚಿಕಿತ್ಸೆಗೆ ನೋಂದಣಿ. ಆನ್‌ಲೈನ್‌ ಕ್ಲೇಮ್‌ 2 ವಾರಗಳಲ್ಲಿ ಇತ್ಯರ್ಥಗೊಳಿಸಿ ಆಸ್ಪತ್ರೆಗಳಿಗೆ ಹಣ ಪಾವತಿ. 1.20 ಕೋಟಿ ಆಯುಷ್ಮಾನ್ ಕಾರ್ಡ್‌ ವಿತರಣೆಗೆ ಜನವರಿಯಲ್ಲಿ ಮೋದಿ ಚಾಲನೆ.

Ayushman Bharat Card
ಆಯುಷ್ಮಾನ್ ಭಾರತ್ ಕಾರ್ಡ್​
author img

By

Published : Dec 9, 2022, 5:55 PM IST

Updated : Dec 9, 2022, 6:11 PM IST

ಬೆಂಗಳೂರು: ಬಡವರ ಆರೋಗ್ಯ ಸುರಕ್ಷತೆಗೆ ಅನುಕೂಲವಾಗಲೆಂದು ಆರ್ಥಿಕ ನೆರವು ನೀಡುವ ಆಯುಷ್ಮಾನ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಇದು ಮಧ್ಯಮ ವರ್ಗದ ಜನರಲ್ಲಿ ಆಶಾಕಿರಣ ಮೂಡಿಸಿದೆ. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY)ಯಿಂದ ಆರ್ಥಿಕವಾಗಿ ದುರ್ಬಲವಿರುವ ಭಾರತೀಯರು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಹಣಕಾಸಿನ ನೆರವು ಪಡೆಯಬಹುದು.

ಆಯುಷ್ಮಾನ್ ಭಾರತ್ ಯೋಜನೆಯ ಅರ್ಹತೆಯು ನಿವಾಸ ಮತ್ತು ಉದ್ಯೋಗದ ಪ್ರದೇಶವನ್ನು ಅವಲಂಬಿಸಿದೆ. ಆಯುಷ್ಮಾನ್ ಭಾರತ್ ಕಾರ್ಡ್ ನಗದುರಹಿತ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಿದೆ. ಈ ಯೋಜನೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಲಾಗಿದೆ. ಸಾಮಾನ್ಯವಾಗಿ ಗಂಭೀರ ಕಾಯಿಲೆಗಳು ಬಂದಾಗ ಬಡಜನರು ಸಾಲ ಮಾಡಿ ಜೀವ ಉಳಿಸುವ ಸಂದರ್ಭ ಹೆಚ್ಚಿರುತ್ತದೆ. ಕೆಲವರು ಉಳಿತಾಯ ಮಾಡಿದ ಹಣವನ್ನೆಲ್ಲಾ ಚಿಕಿತ್ಸೆಗೆ ವೆಚ್ಚ ಮಾಡುತ್ತಾರೆ. ಇನ್ನೂ ಕೆಲವರಿಗೆ ಸಾಲ ಸಿಗದೆ, ಚಿಕಿತ್ಸೆ ಕೊಡಿಸಲಾಗದೆ ಪ್ರಾಣ ಕಳೆದುಕೊಳ್ಳುತ್ತಾರೆ.

ಹೀಗಾಗಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ 2018 ರಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ- ಆಯುಷ್ಮಾನ್ ಭಾರತ ಯೋಜನೆಯನ್ನು ಅನುಷ್ಠಾನಗೊಳಿಸಿತು. ಈ ಯೋಜನೆಯಡಿ ಅಂದಾಜು 10 ಕೋಟಿಗಿಂತ ಹೆಚ್ಚು ಬಡಕುಟುಂಗಳಿಗೆ ವಾರ್ಷಿಕ 5 ಲಕ್ಷ ರೂ ವರೆಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಕರ್ನಾಟಕದಲ್ಲಿ 2018 ಜೂನ್‌ನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಗೊಳಿಸಿದೆ. ಈ ಎರಡು ಯೋಜನೆ ಸಂಯೋಜಿಸಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಎಂಬ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ಅರ್ಹರು ಯಾರು?: ಬಿಪಿಎಲ್ ಕುಟಂಬಸ್ಥರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ ನೋಂದಾಯಿತ ಫಲಾನುಭವಿಗಳಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದ ಕುಟುಂಬಗಳಿಗೆ (ಎಪಿಎಲ್ ಕಾರ್ಡ್ ದಾರರು) ಶೇ.30 ರಷ್ಟು ಚಿಕಿತ್ಸಾ ವೆಚ್ಚವನ್ನು ಸಹ ಪಾವತಿಯ ಆಧಾರದ ಮೇಲೆ ಅಂದರೆ ವಾರ್ಷಿಕ 1.5 ಲಕ್ಷ ರೂ. ಮೊತ್ತದಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ.

ಆಯುಷ್ಮಾನ್ ಕಾರ್ಡ್: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಎಬಿ-ಎಆರ್ ಕೆ ಕಾರ್ಡನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ 10 ರೂ. ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ 35 ರೂ. ಶುಲ್ಕದೊಂದಿಗೆ ಎಬಿಎಆರ್ ಕೆ ಕಾರ್ಡ್ ನೀಡಲಾಗುತ್ತಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ನೀಡಿ ಆರೋಗ್ಯ ಕಾರ್ಡ್ ಪಡೆಯಬಹುದು.

ಸರ್ಕಾರಿ ಆಸ್ಪತ್ರೆ , ಉಚಿತ ಚಿಕಿತ್ಸೆ: ಈ ಯೋಜನೆಯಡಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ಉತ್ತಮ. ಚಿಕಿತ್ಸೆಗೆ ಈ ಯೋಜನೆಯಡಿ ನಿಗದಿಪಡಿಸಿದ ಪ್ಯಾಕೇಜ್‌ ದರ ಆ ಸರ್ಕಾರಿ ಆಸ್ಪತ್ರೆಗೆ ದೊರೆಯಲಿದೆ. ಈ ಹಣವನ್ನು ಆಸ್ಪತ್ರೆಯವರು ಸೇವಾ ಸೌಲಭ್ಯ ಹಾಗೂ ಚಿಕಿತ್ಸೆ ನೀಡಿದ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡಲು ಸಹಕಾರಿಯಾಗುತ್ತದೆ.

ಡಿಜಿಟಲ್ ಮಿಷನ್: ಪ್ರಧಾನಿ ನರೇಂದ್ರ ಮೋದಿ 2021ರ ಸೆಪ್ಟೆಂಬರ್ 27 ರಂದು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಾರಂಭಿಸಿದರು. ಆರೋಗ್ಯ ರಕ್ಷಣೆ ಪ್ರಕ್ರಿಯೆ ಡಿಜಿಟಲೀಕರಣಗೊಳಿಸುವ ಮತ್ತು ಭಾರತದಲ್ಲಿನ ಆರೋಗ್ಯ ಸೌಲಭ್ಯ ಬಲಪಡಿಸಲು ಇದನ್ನು ರಚಿಸಲಾಯಿತು. ಆರೋಗ್ಯ ಐಡಿ ಅಥವಾ ಎಬಿಎಚ್ ಎ ಎಂಬುದು 14 ಅಂಶಗಳ ವಿಶಿಷ್ಟ ಐಡಿ. ಒಬ್ಬ ವ್ಯಕ್ತಿಯು ತನ್ನ / ಅವಳ ವೈದ್ಯಕೀಯ ದಾಖಲೆಗಳನ್ನು ಡಿಜಿಟಲ್‌ನಲ್ಲಿ ಸಂಗ್ರಹಿಸಬಹುದು ಮತ್ತು ಉಳಿಸಬಹುದು. ಹಾಗೂ ಅವುಗಳನ್ನು ವೈದ್ಯರು ಮತ್ತು ಆರೋಗ್ಯ ವಿಮಾ ಕಂಪನಿಗಳೊಂದಿಗೆ ಸುರಕ್ಷಿತವಾಗಿ ಹಂಚಿಕೊಳ್ಳಬಹುದು.

ಎಬಿಎಚ್ ಎ ಪ್ರಯೋಜನವೇನು?: ಎಬಿಎಚ್ ಎ ಆರೋಗ್ಯ ದಾಖಲೆಗಳಿಗೆ ಸುಲಭ ಪ್ರವೇಶವನ್ನು ಸಕ್ರಿಯಗೊಳಿಸುತ್ತದೆ. ಎಬಿಎಚ್ ಎ ಯೊಂದಿಗೆ, ದೀರ್ಘಾವಧಿಯ ಆರೋಗ್ಯ ಇತಿಹಾಸವಾಗಿ ಸುರಕ್ಷಿತವಾಗಿ ಉಳಿದಿರುವ ಎಲ್ಲಾ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಲಿಂಕ್ ಮಾಡುವ ಆಯ್ಕೆಯನ್ನು ವ್ಯಕ್ತಿ ಹೊಂದಿರುತ್ತಾನೆ. ಆರೋಗ್ಯ ಐಡಿ ಒಬ್ಬ ವ್ಯಕ್ತಿಯನ್ನು ಸುರಕ್ಷಿತ ಮತ್ತು ಸುರಕ್ಷಿತ ಪರಿಸರದಲ್ಲಿ ಡಿಜಿಟಲ್ ಮೂಲಕ ವೈದ್ಯರಿಗೆ ಪ್ರವೇಶವನ್ನು ಹೊಂದಲು ಅನುವು ಮಾಡಿಕೊಡುತ್ತದೆ. ಎಬಿಎಚ್ ಎ ಅನ್ನು ದೃಢವಾದ ಭದ್ರತೆ ಮತ್ತು ಗೂಢಲಿಪೀಕರಣ ಕಾರ್ಯವಿಧಾನಗಳೊಂದಿಗೆ ನಿರ್ಮಿಸಲಾಗಿದೆ. ನಿಮ್ಮ ಒಪ್ಪಿಗೆಯಿಲ್ಲದೆ ವೈದ್ಯಕೀಯ ದಾಖಲೆಗಳನ್ನು ಪಡೆಯಲು ಯಾರಿಗೂ ಅನುಮತಿಸುವುದಿಲ್ಲ.

5 ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ: ಆರೋಗ್ಯ ದಾಖಲೆ ಒಳಗೊಂಡ ಕಾರ್ಡ್‌ ಇದರಲ್ಲಿ ಎಬಿಎಚ್ಎ (Ayushman Bharath Health Account) ಗುರುತಿನ ಸಂಖ್ಯೆಯನ್ನು ಸಹ ನಮೂದು ಮಾಡಿದ್ದು, ರೋಗಿಯ ಆರೋಗ್ಯ ದಾಖಲೆಗಳನ್ನು ಈ ಗುರುತಿನ ಚೀಟಿ ಒಳಗೊಂಡಿದೆ. 1.20 ಕೋಟಿ ಗುರುತಿನ ಚೀಟಿ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ 3 ತಿಂಗಳ ಒಳಗಾಗಿ ಉಳಿದ 4 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಬಿ-ಪಿಎಂಜೆಎವೈ-ಎಆರ್.ಕೆ ಗುರುತಿನ ಚೀಟಿಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.

42 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ: ಹಾಗೊಂದು ವೇಳೆ ಫಲಾನುಭವಿಗಳು ಗುರುತಿನ ಚೀಟಿ ಹೊಂದಿಲ್ಲದಿದ್ದರೂ, ಆಧಾರ್ ಮತ್ತು ಪಡಿತರ ಚೀಟಿ ಮೂಲಕ ರೋಗಿಗಳು ಎಸ್.ಎ.ಎಸ್.ಟಿ ನೋಂದಾಯಿತ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯಬಹುದು. ಈ ಯೋಜನೆ ಪ್ರಾರಂಭವಾದ ನಂತರ 42 ಲಕ್ಷ ಫಲಾನುಭವಿಗಳು, 5,426 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿದ್ದಾರೆ.

ಗುರುತಿನ ಚೀಟಿ: ಬಿಪಿಎಲ್ ಕುಟುಂಬ ಸೇರಿ ಅರ್ಹ 5.09 ಕೋಟಿ ಫಲಾನುಭವಿಗಳಿಗೆ ಗುರುತಿನ ಚೀಟಿಗಳನ್ನು ಸಿದ್ಧಪಡಿಸಿ ಮುದ್ರಿಸಿ ವಿತರಿಸುವ ಗುರಿ ಹೊಂದಲಾಗಿದೆ. ಎಬಿ-ಪಿಎಂಜೆಎವೈ-ಎಆರ್ ಕೆ ಗುರುತಿನ ಚೀಟಿಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮುದ್ರಿಸಿ ಉಚಿತವಾಗಿ ವಿತರಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಸಮ್ಮತಿಸಿದೆ. ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ವಿತರಣೆಗೆ ಜನವರಿಯಲ್ಲಿ ಚಾಲನೆ ನೀಡಲಾಗುತ್ತದೆ.

ಜನವರಿಯಲ್ಲಿ ಮೋದಿ ಚಾಲನೆ: ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ 1.20 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ-ಕರ್ನಾಟಕ ಸಂಯೋಜಿತ ಗುರುತಿನ ಚೀಟಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತಿ ತಿಂಗಳು 1.80 ರಿಂದ 2 ಲಕ್ಷ ಮಂದಿ ಚಿಕಿತ್ಸೆಗಾಗಿ ನೋಂದಣಿಯಾಗುತ್ತಿದ್ದಾರೆ. ಆನ್‌ಲೈನ್‌ ಕ್ಲೇಮ್‌ಗಳನ್ನು 2 ವಾರಗಳಲ್ಲಿ ಇತ್ಯರ್ಥಗೊಳಿಸಿ ಆಸ್ಪತ್ರೆಗಳಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕ್ರಮಗಳಿಂದ ಯೋಜನೆ ವ್ಯಾಪ್ತಿಗೆ ಸೇರ್ಪಡೆಯಾಗಲು ಹೆಚ್ಚಿನ ಆಸ್ಪತ್ರೆಗಳು ನೋಂದಣಿಯಾಗುವ ನಿರೀಕ್ಷೆ ಇದೆ. ಹಾಗೆಯೇ ರೋಗಿಗಳಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿಗೆ ಹಾರಿಕೆ ಉತ್ತರ ನೀಡುವ ಸರ್ಕಾರ: ಸಂದಾಯವಾಗದ ಅನುದಾನ

Last Updated : Dec 9, 2022, 6:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.