ETV Bharat / state

ದೇಶದ ರಾಜಕಾರಣಕ್ಕೆ ಮಾದರಿಯಾದ S.R. ಬೊಮ್ಮಾಯಿ ಪ್ರಕರಣದ ತೀರ್ಪಿನ ಒಂದು ಮೆಲುಕು - ಬೆಂಗಳೂರು ಸುದ್ದಿ

ಎಸ್.ಆರ್. ಬೊಮ್ಮಾಯಿ ಪ್ರಕರಣ ಎಂದೇ ದೇಶದ ರಾಜಕೀಯದಲ್ಲಿ ಪ್ರಸಿದ್ಧವಾಗಿದೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ.

sr-bommai
ಎಸ್.ಆರ್. ಬೊಮ್ಮಾಯಿ ಪ್ರಕರಣ
author img

By

Published : Jul 28, 2021, 11:12 AM IST

ಬೆಂಗಳೂರು : ದೇಶದ ರಾಜಕೀಯ ಇತಿಹಾಸದಲ್ಲಿ "ಎಸ್.ಆರ್. ಬೊಮ್ಮಾಯಿ ಪ್ರಕರಣ" ಎಂದೇ ಆಗಾಗ ಪ್ರಸ್ತಾಪವಾಗುತ್ತಲೇ ಇರುತ್ತದೆ. ಈ ಪ್ರಕರಣ ಕಳೆದ ಮೂರು ದಶಕಗಳಿಂದಲೂ ಇಂದಿಗೂ ಸಹ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ.

ಏನಿದು ಎಸ್.ಆರ್. ಬೊಮ್ಮಾಯಿ ಪ್ರಕರಣ ? : ಎಸ್.ಆರ್. ಬೊಮ್ಮಾಯಿ ಅವರು ಆಗಸ್ಟ್ 13, 1988 ಮತ್ತು ಏಪ್ರಿಲ್ 1989ರ ನಡುವೆ ಕರ್ನಾಟಕದಲ್ಲಿ ಜನತಾದಳ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು. ಏಪ್ರಿಲ್ ತಿಂಗಳಲ್ಲಿ ಕೆಲವು ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ತಾವು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದ ಪತ್ರ ನೀಡಿದ್ದರು. ಸರ್ಕಾರದಲ್ಲಿ ಬಿಕ್ಕಟ್ಟು ಸೃಷ್ಟಿಯಾದಾಗ ಏಪ್ರಿಲ್ 20ರಂದು ಮುಖ್ಯಮಂತ್ರಿಯಾಗಿದ್ದ ಎಸ್.ಆರ್ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ವಿಶ್ವಾಸ ಮತಯಾಚನೆಗೆ ಒಂದು ವಾರದ ಗಡುವು ಕೇಳಿದ್ದರು.

ಆದರೆ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಮರುದಿನ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆಡಳಿತಕ್ಕೆ ಸೂಚಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಅಂದು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು. ಆರ್. ವೆಂಕಟರಾಮನ್ ರಾಷ್ಟ್ರಪತಿಯಾಗಿದ್ದರು. ಆ ಸಂದರ್ಭದಲ್ಲಿ ನಡೆದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಆರ್. ವೆಂಕಟರಾಮನ್ ಅವರು ಕರ್ನಾಟಕದ ಎಸ್ .ಆರ್. ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ವಿಸರ್ಜಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಹಿ ಹಾಕಿದ್ದರು.

ಹೈಕೋರ್ಟ್​ ಮೆಟ್ಟಿಲೇರಿದ್ದ ಎಸ್​ ಆರ್​ ಬೊಮ್ಮಾಯಿ
ಈ ನಡೆಯನ್ನು ಪ್ರಶ್ನಿಸಿ ಎಸ್.ಆರ್. ಬೊಮ್ಮಾಯಿ ಅವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ತ್ವರಿತ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಷ್ಟ್ರಪತಿ ಆಡಳಿತ ಹೇರಿರುವ ಪ್ರಕ್ರಿಯೆ ಸಂವಿಧಾನ ಪ್ರಕಾರವೇ ನಡೆದಿದೆ ಎಂದು ತೀರ್ಪು ನೀಡಿತ್ತು. ಎಸ್. ಆರ್. ಬೊಮ್ಮಾಯಿ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ 1994ರಲ್ಲಿ ಮಹತ್ವದ ತೀರ್ಪು ಪ್ರಕಟಿಸಿತ್ತು.

ಸುಪ್ರೀಂನಿಂದ ಮಹತ್ವದ ಆದೇಶ

ಸರ್ಕಾರವೊಂದಕ್ಕೆ ಬಹುಮತ ಇದೆಯೇ, ಇಲ್ಲವೇ ಎಂದು ನಿರ್ಧರಿಸುವ ವೇದಿಕೆ ವಿಧಾನಸಭೆಯ ಅಧಿವೇಶನವೇ ಹೊರತು ರಾಜಭವನವಲ್ಲ. ಇಷ್ಟೇ ಅಲ್ಲದೆ ಆರ್ಟಿಕಲ್ 356 ರಾಷ್ಟ್ರಪತಿಯವರಿಗೆ ನೀಡಿರುವುದು ಷರತ್ತು ಬದ್ಧ ಅಧಿಕಾರವನ್ನೇ ಹೊರತು ಪರಮಾಧಿಕಾರವನ್ನಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ಪ್ರಕರಣದಿಂದಾಗಿ ಕೇಂದ್ರ ಸರ್ಕಾರವು ತನಗೆ ಇಚ್ಛೆ ಬಂದಾಗ ರಾಜ್ಯ ಸರ್ಕಾರವನ್ನು ವಜಾಗೊಳಿಸುವ ನಡೆಗೆ ತಡೆ ನೀಡಿತು.

ತೀರ್ಪಿನ ಪ್ರಕಾರ, ಸದನವೂ ವಿಶ್ವಾಸಮತವನ್ನು ಸಾಬೀತುಪಡಿಸಲು ಇರುವ ಏಕೈಕ ವೇದಿಕೆ ಎಂದು ಸುಪ್ರೀಂಕೋರ್ಟ್ ತಿಳಿಸಿತು. ಇನ್ನೂ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ನಡೆಯೂ ರಾಜ್ಯದ ಆಡಳಿತದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎನ್ನುವ ವಿಚಾರವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿತು. ಈ ಪ್ರಕರಣ ಮೊದಲ ಬಾರಿಗೆ ಪರಿಣಾಮ ಬೀರಿದ್ದು 1999ರಲ್ಲಿ, ಆಗ ಕೇಂದ್ರದಲ್ಲಿದ್ದ ವಾಜಪೇಯಿ ಸರ್ಕಾರವು ಬಿಹಾರದಲ್ಲಿದ್ದ ರಾಬ್ಡಿದೇವಿ ಸರ್ಕಾರವನ್ನು ವಜಾಗೊಳಿಸಲಾಗಿತ್ತು. ಆದರೆ ಈ ವಿಚಾರವು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದಾಗ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಯಿತು.

ಇಂದಿಗೂ ಕೂಡ ಅತಂತ್ರ ವಿಧಾನಸಭೆ, ಸರ್ಕಾರದ ರಚನೆ ಪ್ರಕ್ರಿಯೆ ಕಾರ್ಯಗಳು ಬಂದಾಗ ಬೊಮ್ಮಾಯಿ ಪ್ರಕರಣ ಆಗಾಗ ಮುನ್ನಲೆಗೆ ಬರುತ್ತದೆ. ಈ ಹಿನ್ನಲೆಯಲ್ಲಿ ಇಂದಿಗೂ ಕೂಡ ಬೊಮ್ಮಾಯಿ ಪ್ರಕರಣ ದೇಶದ ಸಾಂವಿಧಾನಿಕ ಚರಿತ್ರೆಯಲ್ಲಿ ಅತಿ ಹೆಚ್ಚು ಉಲ್ಲೇಖಿತವಾಗಿರುವ ಹಾಗೂ ಅಷ್ಟೇ ತನ್ನ ಪ್ರಸ್ತುತತೆಯನ್ನು ಉಳಿಸಿಕೊಂಡಿರುವ ಪ್ರಕರಣ ಎನ್ನುವ ಖ್ಯಾತಿಯನ್ನು ಪಡೆದಿದೆ. ಇದು ಎಸ್ .ಆರ್. ಬೊಮ್ಮಾಯಿ ಪ್ರಕರಣ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.