ETV Bharat / state

ಕೋವಿಡ್​ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ: ಎಸ್​​. ಆರ್.​ ಪಾಟೀಲ್​ - ರಾಜ್ಯದಲ್ಲಿ ಕೊರೊನಾ ರೋಗಿಗಳ ಸಾವು

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೂ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ತಲೆದೋರಿದೆ.

Srp
Srp
author img

By

Published : Apr 15, 2021, 6:07 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗಿಗಳ ಸಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರೋಗ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದ್ದು, ಕೋವಿಡ್​ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ.

ಆತಂಕದ ವಿಚಾರದ ಅಂದ್ರೆ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾವಿನ ಪ್ರಮಾಣ ಕೂಡ ಹೆಚ್ಚಾಗಿದೆ ಎಂದಿದ್ದಾರೆ.

ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಬೆಡ್​ಗಳನ್ನು ಮೀಸಲಿಡುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ರಾಜ್ಯದ ಹಲವೆಡೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಸೋಂಕಿತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೂ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ತಲೆದೋರಿದೆ. ಬೆಂಗಳೂರಿನ ಬಹುತೇಕ ಚಿತಾಗಾರಗಳು ಸ್ಥಗಿತವಾಗಿದ್ದು, ಸಾವನ್ನಪ್ಪಿದ ಸೋಂಕಿತರ ಶವಗಳನ್ನ ಆ್ಯಂಬುಲೆನ್ಸ್​ಗಳಲ್ಲಿ ಇಟ್ಟು ಕ್ಯೂನಲ್ಲಿ ನಿಂತಿರುವ ದೃಶ್ಯ ಭಯಾನಯಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ದೃಶ್ಯಗಳನ್ನ ನೋಡಿದರೇನೇ ಗೊತ್ತಾಗುತ್ತೆ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಯಾವ ಮಟ್ಟಿಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.