ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ತಿಳಿಸಿರುವ ಅವರು, ಕೇಂದ್ರದ ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಹರಿಯಾಣ, ಪಂಜಾಬ್, ರಾಜಸ್ಥಾನ ಸೇರಿ ಇನ್ನಿತರ ರಾಜ್ಯಗಳಿಂದ ಅನ್ನದಾತರ ದಂಡು ದೆಹಲಿ ಗಡಿ ಪ್ರದೇಶಗಳಿಗೆ ಹರಿದುಬರುತ್ತಿದೆ ಎಂದಿದ್ದಾರೆ.
-
ಟಿಕ್ರಿ, ಘಾಜಿಪುರ ಹಾಗೂ ಸಿಂಘು ಗಡಿಗೆ ರೈತರು ಬರದಂತೆ ಪೊಲೀಸರು ಹೆದ್ದಾರಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ.
— S R Patil (@srpatilbagalkot) February 3, 2021 " class="align-text-top noRightClick twitterSection" data="
ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. 2/3#FarmersProtest
">ಟಿಕ್ರಿ, ಘಾಜಿಪುರ ಹಾಗೂ ಸಿಂಘು ಗಡಿಗೆ ರೈತರು ಬರದಂತೆ ಪೊಲೀಸರು ಹೆದ್ದಾರಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ.
— S R Patil (@srpatilbagalkot) February 3, 2021
ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. 2/3#FarmersProtestಟಿಕ್ರಿ, ಘಾಜಿಪುರ ಹಾಗೂ ಸಿಂಘು ಗಡಿಗೆ ರೈತರು ಬರದಂತೆ ಪೊಲೀಸರು ಹೆದ್ದಾರಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ.
— S R Patil (@srpatilbagalkot) February 3, 2021
ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. 2/3#FarmersProtest
ಟಿಕ್ರಿ, ಘಾಜಿಪುರ ಹಾಗೂ ಸಿಂಘು ಗಡಿಗೆ ರೈತರು ಬರದಂತೆ ಪೊಲೀಸರು ಹೆದ್ದಾರಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ. ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ.
ರೈತರನ್ನು ಉಗ್ರರಂತೆ ನೋಡುತ್ತಿರುವ ಕೇಂದ್ರ ಸರ್ಕಾರದ ಈ ಕ್ರಮ ರೈತ ವಿರೋಧಿಯಾಗಿದೆ. ರೈತರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸೌಜನ್ಯವನ್ನೂ ಸಹ ಪ್ರಧಾನಿ ನರೇಂದ್ರ ಮೋದಿ ಅವರು ತೋರುತ್ತಿಲ್ಲ. ನ್ಯಾಯಕ್ಕಾಗಿ ಹೋರಾಡುತ್ತಿರುವ ಮಣ್ಣಿನ ಮಕ್ಕಳನ್ನು ಉಗ್ರರಂತೆ ಕಾಣುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದಿದ್ದಾರೆ.