ನೆಲಮಂಗಲ : ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನ ಹಳ್ಳಿಯನ್ನು ನಗರ ಸಭೆಯಾಗಿ ಮೇಲ್ದರ್ಜೇಗೇರಿಸಿದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಅಭಿನಂದಿಸಿದ್ದಾರೆ.
ಲಕ್ಷ್ಮೀಪುರ, ಚಿಕ್ಕಬಿದರಕಲ್ಲು ಮತ್ತು ಶ್ರೀಕಂಠಪುರ ಗ್ರಾಮ ಪಂಚಾಯತ್ಗಳನ್ನು ಸೇರಿಸಿ ಮಾದನಾಯಕನ ಹಳ್ಳಿ ನಗರಸಭೆ ರೂಪುಗೊಳ್ಳಲಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮಾದನಾಯಕನಹಳ್ಳಿ ಬರುವುದರಿಂದ, ಕ್ಷೇತ್ರದ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಎಸ್.ಆರ್.ವಿಶ್ವನಾಥ್ ಅಭಿನಂದನೆ ಸಲ್ಲಿಸಿದ್ದಾರೆ.