ETV Bharat / state

ಮತದಾರರ ಮಾಹಿತಿ ದುರ್ಬಳಕೆ ಆರೋಪ: ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು - ಸರ್ಕಾರೇತರ ಸಂಸ್ಥೆ ಚಿಲುಮೆಯ ಉದ್ಯೋಗಿಗಳು

ನಿರೀಕ್ಷಣಾ ಜಾಮೀನು ಕೋರಿ ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ನೇತೃತ್ವದ ಏಕಸದಸ್ಯ ಪೀಠ ಅರ್ಜಿಯನ್ನು ಮಾನ್ಯ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಘಟನೆಗೂ ಅರ್ಜಿದಾರರಿಗೂ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲ. ಪ್ರಕರಣ ಸಂಬಂಧ ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು. ಇದರಿಂದ ನ್ಯಾಯಸಮ್ಮತ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ವಾದ ಮಂಡಿಸಿದ್ದಾರೆ.

High Court
ಹೈಕೋರ್ಟ್
author img

By

Published : Dec 23, 2022, 12:38 PM IST

ಬೆಂಗಳೂರು : ಮತದಾರರ ಮಾಹಿತಿ ದುರುಪಯೋಗ ಪ್ರಕರಣದ ಆರೋಪದಡಿ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಿರೀಕ್ಷಣಾ ಜಾಮೀನು ಕೋರಿ ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ನೇತೃತ್ವದ ಏಕಸದಸ್ಯ ಪೀಠ ಅರ್ಜಿಯನ್ನು ಮಾನ್ಯ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಘಟನೆಗೂ ಅರ್ಜಿದಾರರಿಗೂ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲ. ಪ್ರಕರಣ ಸಂಬಂಧ ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು. ಇದರಿಂದ ನ್ಯಾಯಸಮ್ಮತ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ವಾದ ಮಂಡಿಸಿದರು.

ಅಲ್ಲದೆ, ಮತದಾರರ ಮಾಹಿತಿ ಸಂಗ್ರಹಿಸುವ ಚಟುವಟಿಕೆಯಲ್ಲಿ ತನ್ನ ಪಾತ್ರವಿಲ್ಲ. ಇದಕ್ಕೆ ಸರ್ಕಾರೇತರ ಸಂಸ್ಥೆ ಚಿಲುಮೆಯ ಉದ್ಯೋಗಿಗಳು ಉತ್ತರಿಸಬೇಕಿದೆ ಎಂದು ಅರ್ಜಿದಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ಶ್ರೀನಿವಾಸ್ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿದ್ದರು. ಇವರನ್ನು ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿದ್ದು, ಲಿಖಿತ ಅನುಮತಿ ಇಲ್ಲದೇ ಕೇಂದ್ರಸ್ಥಾನ ತೊರೆಯದಂತೆ ಸರ್ಕಾರವು ನಿರ್ಬಂಧ ವಿಧಿಸಿಸಿತ್ತು.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ. ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇಂದ್ರ ಚುನಾವಣಾ ಆಯೋಗವು ಲೋಪ ತಡೆಯುವಲ್ಲಿ ವಿಫಲರಾದ ಆರೋಪದಲ್ಲಿ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಅಮಾನತಿಗೆ ಸೂಚನೆ ನೀಡಿತ್ತು.
ಇದನ್ನೂ ಓದಿ: ನಕಲಿ ಭೂ ದಾಖಲೆ ಸೃಷ್ಟಿಸಿ ವಂಚನೆಗೆ ಯತ್ನ ; ಬಿಬಿಎಂಪಿ ಕಚೇರಿ ಸಿಬ್ಬಂದಿ ಸಹಿತ ಐವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.