ಬೆಂಗಳೂರು: ಮಗಳ ಮದುವೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ರೀರಾಮುಲು ಭೇಟಿಯಾಗಿ ಮಗಳ ಮದುವೆಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಹಿರಿಯ ಪುತ್ರಿಯ ವಿವಾಹ ಸಮಾರಂಭದ ಕರೆಯೋಲೆಯೊಂದಿಗೆ ದೆಹಲಿಗೆ ತೆರಳಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.
ನಿನ್ನೆ ಸಂಜೆ ಅಮಿತ್ ಶಾ ಭೇಟಿಯಾಗಿ ತಮ್ಮ ಹಿರಿಯ ಪುತ್ರಿ ರಕ್ಷಿತಾ ಹಾಗೂ ಲಲಿತ್ ಕುಮಾರ್ ವಿವಾಹ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ನಂತರ ಬಿಜೆಪಿಯ ನಾಯಕರು,ಕೇಂದ್ರ ಸಚಿವರಿಗೂ ಆಹ್ವಾನ ನೀಡಿದ್ದಾರೆ.