ಬೆಂಗಳೂರು: ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಎಡವಿರುವ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಎಷ್ಟು ಅನ್ಯಾಯವಾಗಿದೆ ಎಂಬುದು ಗೊತ್ತಿದೆ. ಸರ್ಕಾರ ಯಾವ ರೀತಿ ನಡೆದುಕೊಂಡಿದೆ ಎಂಬುದನ್ನು ಗಮನಿಸಿದ್ದೇನೆ. ನನ್ನ ಆರೋಗ್ಯ ಸುಧಾರಣೆಯಾದರೆ ಖಂಡಿತವಾಗಿಯೂ ಪ್ರಧಾನಿ ಅವರನ್ನು ಭೇಟಿ ಮಾಡುತ್ತೇನೆ. ನನ್ನ ಆರೋಗ್ಯ ಸ್ಥಿತಿ ಹೇಗಿದೆ ಎಂಬುದು ಎಲ್ಲರಿಗೂ ಗೊತ್ತಿದ್ದು, ಹೋರಾಟ ಮಾಡುವ ಕಾಲದಲ್ಲಿ ಹೋರಾಟ ಮಾಡಿದ್ದೇನೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಎರಡೂವರೆ ಸಾವಿರ ಕ್ಯೂಸೆಕ್ ನೀರು ಬಿಡಲು ತಿಳಿಸಲಾಗಿದೆ. ನನಗೆ ಒಂದು ಅರ್ಥ ಆಗ್ತಿಲ್ಲ. ಈ ಅಧಿಕಾರಿಗಳು ಏನು ಕೆಲಸ ಮಾಡುತ್ತಾರೆ. ಕೆರೆ ತುಂಬಿಸಲಾಗಿದೆ ಎಂದು ನೆಪ ಹೇಳಿ ಜನತೆಗೆ ಸಮಾಧಾನ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತಿದೆ. ಹೆಣ್ಣುಮಕ್ಕಳು ನೀರಿಗಾಗಿ ಕಿತ್ತಾಡುವ ಪರಿಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿ ಬರಬಾರದು ಎಂದು ಹೇಳಿದರು. ಇದಕ್ಕೂ ಮುನ್ನ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಇಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಭೇಟಿ ಸಮಾಲೋಚನೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಶ್ರೀರಾಮುಲು ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ನಂತರ ತಮ್ಮ ಮಗಳ ಮದುವೆಗೆ ಆಹ್ವಾನ ನೀಡಿದ್ದಾರೆ.
ಮಾಜಿ ಸಚಿವ ಶ್ರೀರಾಮುಲು ಭೇಟಿ: ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಭೇಟಿ ಸಮಾಲೋಚನೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಶ್ರೀರಾಮುಲು ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಎಲ್ಲೂ ಕಾಣಿಸಿಕೊಳ್ಳದ ಶ್ರೀರಾಮುಲು ಅವರು, ದಿಢೀರನೆ ಇಂದು ದೇವೇಗೌಡರನ್ನು ಭೇಟಿ ಮಾಡಿರುವುದು ಭಾರಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯ ರಾಜಕಾರಣ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಶ್ರೀರಾಮುಲು ಅವರು ಯಾವ ಕಾರಣಕ್ಕೆ ದೇವೇಗೌಡರನ್ನು ಭೇಟಿ ಮಾಡಿದ್ದಾರೆ ಎಂಬುದು ನಿಗೂಢವಾಗಿದೆ.
ಇದನ್ನೂ ಓದಿ: 102 ಕೋಟಿ ಹಣಕ್ಕೆ ಸಂಬಂಧಿಸಿದಂತೆ ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು: ಎನ್ ರವಿಕುಮಾರ್ ಆಗ್ರಹ