ಬೆಂಗಳೂರು: 2023-24 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.
ರಾಜ್ಯದ ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳು ಪ್ರಾಂಶುಪಾಲರುಗಳು ತಮ್ಮ ಶಾಲಾ ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಮಂಡಳಿ ಸೂಚಿಸಿದೆ. ಮಂಡಳಿಯಿಂದ ಪ್ರಕಟಿಸಿರುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಇಂದಿನಿಂದ ಡಿಸೆಂಬರ್ 15 ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ.
ಆಕ್ಷೇಪಣೆಯನ್ನು ಮಂಡಳಿಯ ಇಮೇಲ್ ವಿಳಾಸ chairpersonkseab@gmail.com ಹಾಗೂ ಹಾರ್ಡ್ ಪ್ರತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿ:
02.03.2024 - ಕನ್ನಡ
04.03.2023 - ಇತಿಹಾಸ, ಭೌತಶಾಸ್ತ್ರ
06.03.2023 - ಸಮಾಜ ಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನಶಾಸ್ತ್ರ
07.03.2023 - ಹಿಂದಿ
09.03.2023 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
11.03.2023 - ಇಂಗ್ಲಿಷ್
13.03.2023 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
16.03.2023 - ಭೂಗೋಳಶಾಸ್ತ್ರ, ಜೀವಶಾಸ್ತ್ರ
18.03.2023 - ರಸಾಯನಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
20.03.2023 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
22.03.2023 - ಅರ್ಥಶಾಸ್ತ್ರ
ಎಸ್ಎಸ್ಎಲ್ಸಿ ಪರೀಕ್ಷೆ -1ರ ವೇಳಾಪಟ್ಟಿ:
25.03.2023 - ಪ್ರಥಮ ಭಾಷೆ ಕನ್ನಡ
27.03.2023 - ಸಮಾಜ ವಿಜ್ಞಾನ
30.03.2023 - ವಿಜ್ಞಾನ
02.04.2023 - ಗಣಿತ
04.04.2023 - ತೃತೀಯ ಭಾಷೆ ಹಿಂದಿ
06.04.2023 - ದ್ವಿತೀಯ ಭಾಷೆ ಇಂಗ್ಲಿಷ್
ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ಘೋಷಣೆ ಮಾಡಲಾಗಿದೆ. ಅದರಂತೆ ಮೊದಲ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಬಾರಿ ಲೋಕಸಭಾ ಚುನಾವಣೆ ಇರುವುದರಿಂದಾಗಿ ಪ್ರಸ್ತುತ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಕಡಿಮೆಯಾಗಿದೆ.