ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.. - ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ
ಎಸ್​ಎಸ್​ಎಲ್​ಸಿ ಪರೀಕ್ಷೆ
author img

By

Published : Oct 29, 2022, 9:02 PM IST

Updated : Oct 29, 2022, 9:08 PM IST

ಬೆಂಗಳೂರು: ಎಸ್​ಎಸ್ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, 2023 ರ ಏ.1 ರಿಂದ ಏ.15ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು/ ಪೋಷಕರು ತಮ್ಮ ಆಕ್ಷೇಪಣೆ ಸಲ್ಲಿಸಲು ಅ.29ರಿಂದ ನ.28ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ Ipikseeb@gmail.com ಅಥವಾ sadpi.csec.kseebi@gmail.com ಈ-ಮೇಲ್ ಮುಖಾಂತರ ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003ರ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ವಿವರ:

ಏ.1 - ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲೀಷ್ (ಎನ್ ಸಿ ಈ ಆರ್ ಟಿ) ಹಾಗೂ ಸಂಸ್ಕೃತ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:45ರವರೆಗೆ ನಡೆಯಲಿವೆ.

ಏ.4 - ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1:45ರವರೆಗೆ ನಡೆಯಲಿವೆ.

ಏ.6 - ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪರೀಕ್ಷೆ ನಡೆಯಲಿದೆ. ಸಮಯ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30.

ಏ.8 - ಎಲಿಮೆಂಟ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ vi, ಎಲಿಮೆಂಟ್ ಆಫ್ ಮೆಕ್ಯಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ii ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.30 ರವರೆಗೆ ಹಾಗೂ ಎಲಿಮೆಂಟ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ vi, ಇಂಜಿನಿಯರಿಂಗ್ ಗ್ರಾಫಿಕ್ ii ಪರೀಕ್ಷೆಗಳು ಮಧ್ಯಾಹ್ನ 1.45 ರಿಂದ ಸಂಜೆ 5.45. ಎಲಿಮೆಂಟ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ iv ಹಾಗೂ ಎಲಿಮೆಂಟ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1:45 ರವರೆಗೆ, ಪ್ರೋಗ್ರಾಮಿಂಗ್ ಇನ್ ಆನ್ಸಿ 'ಸಿ' ಹಾಗೂ ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1.45ರ ವರೆಗೆ ನಡೆಯಲಿದೆ. ಹಾಗೂ ಅರ್ಥಶಾಸ್ತ್ರ ಪರೀಕ್ಷೆ ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ ನಡೆಯಲಿದೆ.

ಏ. 10 - ವಿಜ್ಞಾನ, ರಾಜ್ಯಶಾಸ್ತ್ರ ಹಾಗೂ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆ

ಏ.12 - ತೃತೀಯ ಭಾಷೆ ಹಿಂದಿ (ಎನ್​ಸಿಈಆರ್​ಟಿ), ಹಿಂದಿ ಕನ್ನಡ ಇಂಗ್ಲಿಷ್ ಅರೇಬಿಕ್ ಪರ್ಶಿಯನ್ ಉರ್ದು ಸಂಸ್ಕೃತ ಕೊಂಕಣಿ ಹಾಗೂ ತುಳು ಭಾಷೆಯ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ. ಅಂದು ನಡೆಯುವ ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿವರ ಇಂತಿದೆ, ಬೆಳಗ್ಗೆ 10.30 ರಿಂದ 12:45 ರವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳು ನಡೆಯಲಿವೆ.

ಏ.15 - ಬೆಳಿಗ್ಗೆ 10.30 ರಿಂದ 1.45 ರವರೆಗೆ ಸಮಾಜ ವಿಜ್ಞಾನ ಪರೀಕ್ಷೆ.

Last Updated : Oct 29, 2022, 9:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.