ಬೆಂಗಳೂರು: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯು ಇದೇ ಸೆಪ್ಟೆಂಬರ್ 21 ರಿಂದ 28 ರವರೆಗೆ ನಡೆಯಲಿದೆ. ಈ ಹಿನ್ನೆಲೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ( ಹಾಲ್ ಟಿಕೆಟ್) ತೋರಿಸಿದರೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ .ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ.
ಬಿಎಂಟಿಸಿ ಬಸ್ನಲ್ಲೂ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನ ಬಳಸಿಕೊಳ್ಳಬಹುದಾಗಿದೆ.