ಬೆಂಗಳೂರು: ಮಾರ್ಚ್ 27ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕದಲ್ಲಿ ಯಾವುದೇ ಮುಂದೂಡಿಕೆ ಇಲ್ಲ. ವದಂತಿಗಳಿಗೆ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಕಿವಿಗೊಡಬೇಡಿ ಎಂದು ಎಸ್ಸೆಸ್ಸೆಲ್ಸಿ ಬೋರ್ಡ್ ನಿರ್ದೇಶಕಿ ಸುಮಂಗಲ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾರ್ಚ್ 20ರಿಂದಲೇ ಪರೀಕ್ಷೆ ನಡೆಯಲಿದೆ ಎಂದು ಕೆಲವು ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ. ಇದು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಲು ನಡೆಸಿದ ಕೃತ್ಯ ಎನ್ನಲಾಗ್ತಿದೆ.
ಆಧಾರ ರಹಿತವಾಗಿರುವುದನ್ನು ಯಾವುದೇ ಕಾರಣಕ್ಕೂ ನಂಬಬೇಡಿ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆ ಕಡೆ ಗಮನಹರಿಸಿ ಎಂದು ನಿರ್ದೇಶಕರು ಸಲಹೆ ನೀಡಿದ್ದಾರೆ.