ETV Bharat / state

SSLC ಪರೀಕ್ಷಾ ಸಿದ್ಧತೆ ಆರಂಭಿಸಿ:  ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಇಂದು ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪ ನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ ಶಿಕ್ಷಣ ಸಚಿವರು, ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದಾರೆ.

sslc exam preperation to start
ಶಿಕ್ಷಣ ಸಚಿವ ಸುರೇಶ್ ಕುಮಾರ್
author img

By

Published : May 4, 2020, 5:35 PM IST

ಬೆಂಗಳೂರು: ಕೊರೊನಾ ಲಾಕ್​​ಡೌನ್ ನಿಂದ ಸ್ಥಗಿತಗೊಂಡಿದ್ದ ಎಸ್ಎಸ್ಎಲ್​ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಈಗಿನಿಂದಲೇ ಪ್ರಾರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್
ಇಂದು ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪ ನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದಾರೆ. ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕು ಎಂದು ಬಯಸುತ್ತಿದ್ದಾರೆ.‌ ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು ಸೂಚಿಸಿದರು.
ಕೊರೊನಾ ಹಿನ್ನೆಲೆ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್​​ಮೆಂಟ್​ ಜಿಲ್ಲೆಗಳೆಂದು ಗುರುತಿಸಿರುವ ಹಿನ್ನೆಲೆ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಸಚಿವರು ಅಭಿಪ್ರಾಯ ಪಡೆದಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿರುವ ಈ ದಿನಮಾನಗಳಲ್ಲಿ ಮಕ್ಕಳ ಮಾನಸಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಿದ್ಧತೆಯನ್ನು ಜಾರಿಯಲ್ಲಿಡಬೇಕೆಂದು ಸೂಚಿಸಿದರು.
ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ:
ಇನ್ನು ಎಸ್​ಎಸ್​​ಎಲ್​​ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸಿ, ಥರ್ಮಲ್ ತಪಾಸಣೆಗೆ ಒಳಪಡಿಸಿದ ಬಳಿಕವೇ ಪರೀಕ್ಷೆಗೆ ಹಾಜರುಪಡಿಸಲು ಕ್ರಮಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು. ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಆಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು.

ಕಂಟೇನ್​​ಮೆಂಟ್​ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವುದು, ಉಪ ಕೇಂದ್ರಗಳನ್ನು ಸ್ಥಾಪಿಸುವುದು, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ತಲಾ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸುವುದು, ಪ್ರತಿ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಸಮಗ್ರವಾದ ಕ್ರಿಯಾಯೋಜನೆ ತಯಾರಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ನಿರ್ದೇಶನ ನೀಡಿದ ಸಚಿವ ಸುರೇಶ್ ಕುಮಾರ್, ಪರೀಕ್ಷಾ ಕೇಂದ್ರಗಳನ್ನು ಹಾಗೂ ಕೊಠಡಿಗಳನ್ನು ಹೆಚ್ಚಿಸಲು ಸ್ಥಳ ಪರಿಶೀಲನೆ ನಡೆಸಿ ಇಲಾಖಾ ಮುಖ್ಯಸ್ಥರಿಗೆ ಕೂಡಲೇ ವರದಿ ಸಲ್ಲಿಸಬೇಕೆಂದು ಸೂಚಿಸಿದರು.

ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ:
ಶಿಕ್ಷಣ ಇಲಾಖೆ ಚಂದನವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಮಕ್ಕಳವಾಣಿ ಯೂ -ಟ್ಯೂಬ್ ಚಾನೆಲ್ ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಅನುಮಾನಗಳಿದ್ದರೆ ಪರೀಕ್ಷೆ ಇಷ್ಟರಲ್ಲೇ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ಮಾಡಬೇಕೆಂದು ಸಚಿವರು ಡಿಡಿಪಿಐಗಳಿಗೆ ಸೂಚಿಸಿದರು.
ಪರೀಕ್ಷೆ ಸಿದ್ಧತೆಗೆ ಸಮಯ:

ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು ಅವಶ್ಯಕ ಅಂತರವನ್ನು ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.

ಎಸ್ಎಸ್ಎಲ್ ಸಿ ಪರೀಕ್ಷಾ ಸಿದ್ಧತೆ ಕುರಿತು, ಆನ್​ಲೈನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹಿಂದಿನ ಪ್ರಶ್ನೆ ಪತ್ರಿಕೆ - ಉತ್ತರ ಪತ್ರಿಕೆ ವಿನಿಮಯ, ಸಹಾಯವಾಣಿ ಮೂಲಕ ಸಂದೇಹಗಳ ನಿವಾರಣೆ, ಸ್ಥಳೀಯ ರೇಡಿಯೋ ಕೇಬಲ್ ಟಿವಿ ಚಾನೆಲ್ ಗಳ ಮೂಲಕ ಬೋಧನಾ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ ಇಲಾಖೆಯ ಜಿಲ್ಲಾ ಆಡಳಿತಗಳ ಹಲವಾರು ಉಪಕ್ರಮಗಳನ್ನು ಶ್ಲಾಘಿಸಿದ ಸಚಿವರು, ಪರೀಕ್ಷೆಗಳನ್ನು ತುಂಬಾ ಆತ್ಮವಿಶ್ವಾಸದಿಂದ ಎದುರು ನೋಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಇದೇ ರೀತಿಯ ಭರವಸೆ ಮೂಡಿಸುವ ಪ್ರಯತ್ನಗಳು ಪರೀಕ್ಷಾ ಪಕ್ರಿಯೆ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಜಾರಿಯಲ್ಲಿರಲಿ ಎಂದು ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.