ETV Bharat / state

ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ ಸಾಧ್ಯತೆ: ಹೀಗಿರಲಿದೆ ನೋಡಿ ಪರೀಕ್ಷಾ ವಿಧಾನ.. - sslc exam

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
author img

By

Published : Jun 4, 2021, 10:24 AM IST

Updated : Jun 4, 2021, 12:19 PM IST

ಬೆಂಗಳೂರು: ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವವರಿದ್ದರು. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸಾಧ್ಯವಿಲ್ಲ. ಎಸ್​ಎಸ್​ಎಲ್​ಸಿ ಮಕ್ಕಳನ್ನು ಕಳೆದ ವರ್ಷದ ಶೈಕ್ಷಣಿಕ ಪ್ರಗತಿ ಆಧಾರದ ಮೇಲೆ ಪಾಸ್​ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ. ಆದ್ದರಿಂದ ಈ ಬಾರಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

SSLC ಪರೀಕ್ಷೆ ಹೀಗೆ ನಡೆಯುತ್ತದೆ..

- ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಎರಡೇ ಪ್ರಶ್ನೆ ಪತ್ರಿಕೆಗಳ ಮೂಲಕ ನಡೆಸಲಾಗುವುದು.

- ಒಟ್ಟು 6 ವಿಷಯಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗುವುದು. ಎರಡೇ ಪ್ರಶ್ನೆ ಪತ್ರಿಕೆಗಳನ್ನು ತೆಗೆಯಲಾಗುವುದು.

- ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್

- ಇನ್ನೊಂದು ಪತ್ರಿಕೆಯಲ್ಲಿ ಭಾಷಾ ವಿಷಯಗಳು ಇರಲಿವೆ.

- ಬಹು ಆಯ್ಕೆ ಪ್ರಶ್ನೆಗಳನ್ನು(Multiple choice questions) ಕೇಳಲಾಗುವುದು.

- ಸರಳ ಹಾಗೂ ನೇರ ಪ್ರಶ್ನೆಗಳಿರಲಿವೆ.

- ಗ್ರೇಡ್​ ಆಧಾರಿತ ಫಲಿತಾಂಶ. A, A+ ಮಾದರಿಯಲ್ಲಿ ಗ್ರೇಡ್​ ವ್ಯವಸ್ಥೆ ಇರಲಿದೆ.

ಪರೀಕ್ಷೆ ಯಾವಾಗ?

- ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ

- 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ

- ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ

- ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ

- ಒಟ್ಟು ಆರು ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ

- ಒಂದು ಕೊಠಡಿಯಲ್ಲಿ 10-12 ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ

- ಎಸ್​​ಎಸ್​ಎಲ್​ಸಿ ಪರೀಕ್ಷೆ ನಡೆಯುವ ಕೊಠಡಿ ಮೇಲ್ವಿಚಾರಕರು ಕೊರೊನಾ ಲಸಿಕೆ ಪಡೆದಿರಬೇಕು ಎಂಬ ನಿಯಮ.

ಯಾರನ್ನೂ ಫೇಲ್​ ಮಾಡುವುದಿಲ್ಲ:

10ನೇ ತರಗತಿ ಪರೀಕ್ಷೆಯಲ್ಲಿ ಯಾರನ್ನೂ ಫೇಲ್​ ಮಾಡುವುದಿಲ್ಲ. ಮೊದಲೇ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡುತ್ತೇವೆ. ಅದನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಿ. ಒತ್ತಡವಾಗಲಿ, ಆತಂಕವಾಗಲಿ ಬೇಡ. ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸುತ್ತೇವೆ. ಪರೀಕ್ಷೆ ಬರೆಯುವ ಎಲ್ಲರಿಗೂ N-95 ಮಾಸ್ಕ್ ನೀಡುತ್ತೇವೆ. ಮಾದರಿ ಪ್ರಶ್ನೆಪತ್ರಿಕೆ ಶಾಲೆಗಳಿಗೆ ಕಳುಹಿಸುತ್ತೇವೆ, ವೆಬ್‌ಸೈಟ್‌ನಲ್ಲೂ ಮಾದರಿ ಪ್ರಶ್ನೆಪತ್ರಿಕೆ ಹಾಕಲಾಗುವುದು ಎಂದು ಸಚಿವರು ವಿವರಿಸಿದರು.

Last Updated : Jun 4, 2021, 12:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.