ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಕೂಡ ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಕರ್ಯ ಒದಗಿಸಿದೆ. 31.03.2023 ರಿಂದ 15.04.2023 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗಲು ಮತ್ತು ಹಿಂದಿರುಗಲು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಹಾಲ್ ಟಿಕೆಟ್ ಇಲ್ಲದಿದ್ದಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ.
ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಟ್ರಿಪ್ ಕಾರ್ಯಾಚರಣೆ ಇರಲಿದೆ. ಹೆಚ್ಚುವರಿ ಟ್ರಿಪ್ ಅಗತ್ಯತೆ ಕಂಡುಬಂದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಬಯಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ನಿಗದಿಯಂತೆ 60 ರೂ. ಶುಲ್ಕ : ಸಚಿವ ನಾಗೇಶ್
ಕೆಎಸ್ಆರ್ಟಿಸಿಯಿಂದಲೂ ಉಚಿತ ಸೇವೆ: ಕೆಎಸ್ಆರ್ಟಿಸಿ ಈಗಾಗಲೇ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಸ್ ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ.
ಇದನ್ನೂ ಓದಿ: SSLC ವಿದ್ಯಾರ್ಥಿಗಳೇ, ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷೆ ಬರೆಯಿರಿ!