ETV Bharat / state

ಆಗಸ್ಟ್ ಮೊದಲ ವಾರದಲ್ಲಿ ಎಸ್​​ಎಸ್​​​​ಎಲ್​ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್​ - SSLC result

ಈಗಾಗಲೇ ಪಿಯುಸಿ ಪರೀಕ್ಷೆ ನಡೆಸಿ, ಫಲಿತಾಂಶವನ್ನೂ ಪ್ರಕಟಿಸಿರುವ ಶಿಕ್ಷಣ ಇಲಾಖೆ ಇದೀಗ ಎಸ್​​​ಎಸ್​​ಎಲ್​ಸಿ ಫಲಿತಾಂಶ ಘೋಷಣೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಆಗಸ್ಟ್​ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

SSLC result in the first week of August: Minister Suresh Kumar
ಆಗಸ್ಟ್ ಮೊದಲ ವಾರದಲ್ಲಿ ಎಸ್​​ಎಸ್​​​​ಎಲ್​ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್​
author img

By

Published : Jul 20, 2020, 5:25 PM IST

Updated : Jul 20, 2020, 6:46 PM IST

ಬೆಂಗಳೂರು: ಎಸ್​​​​ಎಸ್​​​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದ ವಿವಿಧೆಡೆಯ 5 ಎಸ್​​ಎಸ್​​​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದ ಸಚಿವರು, ರಾಜ್ಯದಾದ್ಯಂತ 220 ಮೌಲ್ಯಮಾಪನ ಕೇಂದ್ರಗಳಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ ಎಂದರು.

ಆಗಸ್ಟ್ ಮೊದಲ ವಾರದಲ್ಲಿ ಎಸ್​​ಎಸ್​​​​ಎಲ್​ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್​

ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು 2 ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದರು.

ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಇದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಇಂದು ಸಚಿವರು ಬೆಂಗಳೂರಿನ ಮಲ್ಲೇಶ್ವರದ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆ, ಎಂಎಲ್ಎ ಪ್ರೌಢ ಶಾಲೆ, ನಿರ್ಮಲಾರಾಣಿ ಪ್ರೌಢ ಶಾಲೆ, ರಾಜಾಜಿನಗರದ ಎಸ್​ಜೆಆರ್​ಸಿ ಕಾಲೇಜು, ಸೇಂಟ್ ಆನ್ಸ್ ಪ್ರೌಢ ಶಾಲೆಗಳ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆ ಪರಿಶೀಲಿಸಿದ್ದಾರೆ.

Last Updated : Jul 20, 2020, 6:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.