ETV Bharat / state

SSLC ಮರುಮೌಲ್ಯಮಾಪನ, ಪೂರಕ ಪರೀಕ್ಷೆ ನೋಂದಣಿಗೆ ದಿನಾಂಕ ನಿಗದಿ - ಎಸ್‌ಎಸ್‌ಎಲ್‌ಸಿ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 15 ರಿಂದ 21 ರವರೆಗೆ ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಇಂದಿನಿಂದ ಮೇ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ.

representative image
ಪ್ರಾತಿನಿಧಿಕ ಚಿತ್ರ
author img

By

Published : May 8, 2023, 12:19 PM IST

ಬೆಂಗಳೂರು: ಎಸ್ಎಸ್​ಎಲ್​​ಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಉತ್ತರ ಪತ್ರಿಕೆಗಳ ಛಾಯಾಪ್ರತಿ, ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕ ಪ್ರಕಟಿಸಿದೆ.

ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆದುಕೊಳ್ಳಲು ಇಂದಿನಿಂದ ಮೇ 14 ರವರೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 15 ರಿಂದ 21 ರವರೆಗೆ ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಇಂದಿನಿಂದ ಮೇ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ‌.

"ಮರು ಎಣಿಕೆ ಹಾಗು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದೇವೆ ಎಂದು ಅನುತ್ತೀರ್ಣ ಆಗಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತೆಗೆದುಕೊಳ್ಳದೇ ಇರಬೇಡಿ. ನಿಮ್ಮ ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆದು ಹೊಂದಾಣಿಕೆ ಮಾಡಿಕೊಂಡು ನೋಡಿ. ಆದರೆ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಿ. ಅನುತ್ತೀರ್ಣ ಆದ ವಿದ್ಯಾರ್ಥಿಗಳು ಆತಂಕ ಪಡಬೇಡಿ, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭವಿಷ್ಯದ ಅವಕಾಶ ಇದೆ. ಪೂರಕ ಪರೀಕ್ಷೆ ತೆಗೆದುಕೊಳ್ಳಿ. ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಿ, ಉತ್ತೀರ್ಣಕ್ಕೆ ಬೇಕಾದ ಕನಿಷ್ಟ ಅಂಕ ಗಳಿಕೆಗೆ ಪ್ರಯತ್ನ ನಡೆಸಿ" ಎಂದು ಅವರು ಸಲಹೆ ನೀಡಿದರು.

ಬಾಲಕಿಯರದ್ದೇ ಮೇಲುಗೈ: ಶೇ.83.89 ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದರೆ ಯಾದಗಿರಿಗೆ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿಗಿಂತ ಈ ಬಾರಿ ಶೇ.1.24 ರಷ್ಟು ಕಡಿಮೆ ಫಲಿತಾಂಶ ಬಂದಿದೆ.

ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಫಲಿತಾಂಶ ಪ್ರಕಟಿಸಿದರು. ಬಳಿಕ ಮಾತನಾಡಿದ ರಿತೇಶ್ ಸಿಂಗ್ "ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆದ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ಹಾಜರಾದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 83.89 ರಷ್ಟು ಫಲಿತಾಂಶ ಬಂದಿದೆ. 4,25,968 ಬಾಲಕರು ಪರೀಕ್ಷೆ ಬರೆದಿದ್ದು ಇದರಲ್ಲಿ 3,41,108 ಬಾಲಕರು ತೇರ್ಗಡೆಯಾಗಿದ್ದಾರೆ. ಶೇ. 80.08 ರಷ್ಟು ಫಲಿತಾಂಶ ಬಂದಿದೆ. 4,09,134 ಬಾಲಕಿಯರು ಪರೀಕ್ಷೆ ಬರೆದಿದ್ದು 3,59,511 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಶೇ. 87.87 ರಷ್ಟು ಫಲಿತಾಂಶ ಬಂದಿದೆ" ಎಂದು ಮಾಹಿತಿ ನೀಡಿದರು.

61,003 ವಿದ್ಯಾರ್ಥಿಗಳು ಎ-ಪ್ಲಸ್ (ಶೇ.90-100) ಅಂಕ, 147634 ವಿದ್ಯಾರ್ಥಿಗಳು ಎ (ಶೇ. 80-89) ಅಂಕ, 175489 ವಿದ್ಯಾರ್ಥಿಗಳು ಬಿ-ಪ್ಲಸ್ (ಶೇ.70-79) ಅಂಕ, 170296 ವಿದ್ಯಾರ್ಥಿಗಳು ಬಿ (ಶೇ.60-69) ಅಂಕ, 116819 ವಿದ್ಯಾರ್ಥಿಗಳು ಸಿ-ಪ್ಲಸ್ (ಶೇ.50-59) ಅಂಕ,19301 ವಿದ್ಯಾರ್ಥಿಗಳು ಸಿ (ಶೇ.35-49) ಅಂಕ ಪಡೆದುಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಉತ್ತೀರ್ಣ ಹಂತದಲ್ಲಿ ಅನುತ್ತೀರ್ಣ ಆಗಿರುವ 59,246 ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಅಂಕದ ಗ್ರೇಸ್ ಮಾರ್ಕ್ಸ್ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ 3,51,392 ವಿದ್ಯಾರ್ಥಿಗಳಲ್ಲಿ 2,79,773 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.79.62 ರ ಫಲಿತಾಂಶ ಪಡೆದರೆ, ಗ್ರಾಮೀಣ ಭಾಗದಲ್ಲಿ 4,83,710 ವಿದ್ಯಾರ್ಥಿಗಳಲ್ಲಿ 4,20,846 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.87 ರಷ್ಟು ಫಲಿತಾಂಶ ಪಡೆದಿದ್ದಾರೆ. ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ ಎಂದರು.

1517 ಸರ್ಕಾರಿ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ. ಅನುದಾನಿತ ಶಾಲೆಗಳಲ್ಲಿ 482 ಶೇ.100 ರಷ್ಟು ಫಲಿತಾಂಶ ಪಡೆದಿದ್ದು, 11 ಶಾಲೆಗಳು ಶೂನ್ಯ ಫಲಿತಾಂಶ ಪಡೆದಿದೆ. ಅನುದಾನ ರಹಿತ 1824 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, 23 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಒಟ್ಟು 3823 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, 34 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಶೂನ್ಯ ಫಲಿತಾಂಶ ಬರಲು ಕಾರಣವೇನು ಎಂದು ಪರಿಶೀಲಿಸಿ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: SSLCಯಲ್ಲಿ ಶೇ 83.89 ಫಲಿತಾಂಶ: ನಾಲ್ವರಿಗೆ 625ಕ್ಕೆ 625! ಚಿತ್ರದುರ್ಗ ಫಸ್ಟ್‌; ಯಾದಗಿರಿ ಲಾಸ್ಟ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.