ETV Bharat / state

SSLCಯಲ್ಲಿ ಶೇ 83.89 ಫಲಿತಾಂಶ: ನಾಲ್ವರಿಗೆ 625ಕ್ಕೆ 625! ಚಿತ್ರದುರ್ಗ ಫಸ್ಟ್‌; ಯಾದಗಿರಿ ಲಾಸ್ಟ್‌ - 2023 SSLC results

2023ರ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು www.karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

sslc-results-announced
ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ
author img

By

Published : May 8, 2023, 10:29 AM IST

Updated : May 8, 2023, 12:13 PM IST

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದಿನಂತೆ ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದು ಶೇಕಡಾ 87.87ರಷ್ಟು ವಿದ್ಯಾರ್ಥಿನಿಯರು ಪಾಸ್​ ಆಗಿದ್ದಾರೆ. ಹಾಗೆಯೇ ಶೇಕಡಾ 80.08 ಬಾಲಕರು​ ತೇರ್ಗಡೆ ಹೊಂದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆ (ಶೇ. 96.80) ಮೊದಲ ಸ್ಥಾನ ಪಡೆದರೆ, ಮಂಡ್ಯ (ಶೇ. 96.74) 2ನೇ ಸ್ಥಾನ ಸಿಕ್ಕಿದ್ದು, ಹಾಸನ (ಶೇ. 96.68) ಮೂರನೇ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ (ಶೇ. 75.49) ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿಗಿಂತ ಈ ಬಾರಿ ಶೇ.1.24 ರಷ್ಟು ಕಡಿಮೆ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳು www.karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿಂದು ಮಂಡಳಿಯ ಅಧ್ಯಕ್ಷ ರಾಮನಾಥನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಅವರು ಮಾಧ್ಯಮಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಬೆಂಗಳೂರಿನ ನ್ಯೂ ಮೆಕಾಲ ಇಂಗ್ಲೀಷ್ ಸ್ಕೂಲ್​ನ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಬಾಲಗಂಗಾಧರನಾಥ ಹೈಸ್ಕೂಲ್​​ನ ವಿದ್ಯಾರ್ಥಿ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಕುಮಾರೇಶ್ವರ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಆಕ್ಸ್​ಫರ್ಡ್ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿ ಭೀಮನಗೌಡ ಹನುಮಂತಗೌಡ ಪಾಟೀಲ್ ಅವರು 100ಕ್ಕೆ 100 ಅಂಕ ಪಡೆದಿದ್ದಾರೆ.

sslc-results-announced
ಜಿಲ್ಲಾವಾರು ಫಲಿತಾಂಶದ ಮಾಹಿತಿ

ಹಾಜರಾದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 83.89ರಷ್ಟು ಫಲಿತಾಂಶ ಬಂದಿದೆ. 4,25,968 ಬಾಲಕರು ಪರೀಕ್ಷೆ ಬರೆದಿದ್ದು, ಇದರಲ್ಲಿ 3,41,108 ಸೇರಿದಂತೆ ಶೇ. 80.08ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. 4,09,134 ಬಾಲಕಿಯರು ಪರೀಕ್ಷೆ ಬರೆದಿದ್ದು, 3,59,511 ವಿದ್ಯಾರ್ಥಿನಿಯರು ಪಾಸ್​​ ಆಗಿದ್ದಾರೆ. ಶೇ. 87.87ರಷ್ಟು ಫಲಿತಾಂಶ ಪಡೆಯುವ ಮೂಲಕ ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕನ್ನಡದಲ್ಲಿ 14,983, ಇಂಗ್ಲಿಷ್​ನಲ್ಲಿ 9,754, ಹಿಂದಿಯಲ್ಲಿ 16,170, ಗಣಿತ 2,132, ವಿಜ್ಞಾನ 983 ಹಾಗೂ ಸಮಾಜ ವಿಜ್ಞಾನದಲ್ಲಿ 8,311 ವಿದ್ಯಾರ್ಥಿಗಳು ಶೇ.100ರಷ್ಟು ಅಂಕ ಗಳಿಸಿದ್ದಾರೆ.

61,003 ವಿದ್ಯಾರ್ಥಿಗಳು ಎ-ಪ್ಲಸ್ (ಶೇ.90-100) ಅಂಕ, 1,47,634 ವಿದ್ಯಾರ್ಥಿಗಳು ಎ (ಶೇ. 80-89) ಅಂಕ, 1,75,489 ವಿದ್ಯಾರ್ಥಿಗಳು ಬಿ-ಪ್ಲಸ್ (ಶೇ.70-79) ಅಂಕ, 1,70,296 ವಿದ್ಯಾರ್ಥಿಗಳು ಬಿ (ಶೇ.60-69) ಅಂಕ, 1,16,819 ವಿದ್ಯಾರ್ಥಿಗಳು ಸಿ-ಪ್ಲಸ್ (ಶೇ.50-59) ಅಂಕ, 19,301 ವಿದ್ಯಾರ್ಥಿಗಳು ಸಿ (ಶೇ.35-49) ಅಂಕ ಪಡೆದುಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಉತ್ತೀರ್ಣ ಹಂತದಲ್ಲಿ ಅನುತ್ತೀರ್ಣ ಆಗಿರುವ 59,246 ವಿದ್ಯಾರ್ಥಿಗಳಿಗೆ ಶೇ.10ರಷ್ಟು ಅಂಕದ ಗ್ರೇಸ್ ಮಾರ್ಕ್ಸ್ ಕೊಡಲಾಗಿದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ 3,51,392 ವಿದ್ಯಾರ್ಥಿಗಳಲ್ಲಿ 2,79,773 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.79.62ರ ಫಲಿತಾಂಶ ಪಡೆದರೆ ಗ್ರಾಮೀಣ ಭಾಗದಲ್ಲಿ 4,83,710 ವಿದ್ಯಾರ್ಥಿಗಳಲ್ಲಿ 4,20,846 ವಿದ್ಯಾರ್ಥಿಗಳು ಪಾಸ್​ ಆಗಿದ್ದು, ಶೇ.87 ರಷ್ಟು ಫಲಿತಾಂಶ ಪಡೆದಿದ್ದಾರೆ. ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ ಎಂದರು.

1,517 ಸರ್ಕಾರಿ ಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ಹೊಂದಿಲ್ಲ. ಅನುದಾನಿತ ಶಾಲೆಗಳಲ್ಲಿ 482 ಶೇ. 100ರಷ್ಟು ಫಲಿತಾಂಶ ಪಡೆದಿದ್ದು, 11 ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ. ಅನುದಾನರಹಿತ 1,824 ಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿದ್ದು, 23 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಒಟ್ಟು 3,823 ಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿದ್ದು, 34 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಶೂನ್ಯ ಫಲಿತಾಂಶ ಬರಲು ಕಾರಣವೇನು ಎಂದು ಪರಿಶೀಲಿಸಿ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷರು ಹೇಳಿದರು.

Last Updated : May 8, 2023, 12:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.