ETV Bharat / state

ಮೇ 2ನೇ ವಾರದಲ್ಲಿ SSLC ಫಲಿತಾಂಶ ಪ್ರಕಟ

ಚುನಾವಣಾ ದಿನಾಂಕ ಹಾಗೂ ಫಲಿತಾಂಶದ ದಿನವನ್ನು ನೋಡಿಕೊಂಡು ಎಸ್ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

author img

By

Published : Apr 21, 2023, 6:26 PM IST

Karnataka Board of Secondary Education Examination
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

ಬೆಂಗಳೂರು: ಮೇ ಎರಡನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 31ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆದಿತ್ತು. 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಈ ಪೈಕಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗು 6,060 ಅನುದಾನಿರಹಿತ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಾಗಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳು, 18,272 ಖಾಸಗಿ ಅಭ್ಯರ್ಥಿಗಳು, 8,862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 301 ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 15 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಿದ್ದರು.

1,845 ಕ್ಲಸ್ಟರ್ ಪರೀಕ್ಷಾ ಕೇಂದ್ರ, 1,354 ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 106 ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 3,60,862 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, 2,20,831 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು, 2,61,118 ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿದ್ದರು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

ಏಪ್ರಿಲ್ 24 ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ. ಇದಕ್ಕಾಗಿ 73 ಸಾವಿರ ಶಿಕ್ಷಕರ ನಿಯೋಜನೆ ಮಾಡಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಚುನಾವಣಾ ಮತದಾನ ಮತ್ತು ಚುನಾವಣಾ ಫಲಿತಾಂಶದ ದಿನಾಂಕವನ್ನು ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದರು.

ಇದನ್ನೂ ಓದಿ: ಏಪ್ರಿಲ್ 24 ರಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ: 73 ಸಾವಿರ ಶಿಕ್ಷಕರ ಬಳಕೆ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.