ETV Bharat / state

ನಾಳೆಯಿಂದ ರಾಜ್ಯಾದ್ಯಂತ 772 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಆರಂಭ

ಎಸ್ಎಸ್ಎಲ್ ಸಿಯಲ್ಲಿ ಪರೀಕ್ಷೆಯಲ್ಲಿ ಭಾಗಿಯಾಗದೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನಾಳೆಯಿಂದ ರಾಜ್ಯಾದ್ಯಂತ ಪೂರಕ ಪರೀಕ್ಷೆಗಳು ಆರಂಭವಾಗಲಿವೆ.

SSLC Exams started
SSLC Exams started
author img

By

Published : Sep 20, 2020, 6:58 PM IST

ಬೆಂಗಳೂರು: ಕೊರೊನಾ ನಡುವೆ ನಡೆದಿದ್ದ ಎಸ್ಎಸ್ ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಭಾಗಿಯಾಗಲು ಆಗದೆ ಇರುವ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿ ನಾಳೆಯಿಂದ ಪೂರಕ ಪರೀಕ್ಷೆ ನಡೆಯಲಿದೆ.

ನಾಳೆಯಿಂದ ಸೆ.28 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಬರಬೇಕಿದೆ. ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕಡೆಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.

ರಾಜ್ಯಾದ್ಯಂತ ಸುಮಾರು 2.13 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ.‌ 772 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಕೊರೊನಾ ಕಾರಣಕ್ಕೆ ಪರೀಕ್ಷಗೆ ಹಾಜರು ಆಗದ 15,075 ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುತ್ತದೆ.

ಇನ್ನು ಕೊರೊನಾ ಹರಡುವ ಕಾರಣ, ಫೇಸ್ ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಪೋಷಕರು ಅಥವಾ ವಿದ್ಯಾರ್ಥಿಗಳು ಗುಂಪು ನಿಲ್ಲುವಂತಿಲ್ಲ. ಮೊದಲ ದಿನ ಗಣಿತ ಹಾಗೂ ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.