ETV Bharat / state

ಎಸ್ಎಸ್ಎಲ್​ಸಿ ಫಲಿತಾಂಶ ಹೊರಬಿದ್ದ ದಿನವೇ ಪೂರಕ ಪರೀಕ್ಷೆಯ ವೇಳಾಪಟ್ಟಿ‌ ಪ್ರಕಟ

2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಳ್ಳಬಹುದು.

SSLC supplementary exam
ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ‌ ಪ್ರಕಟ
author img

By

Published : May 19, 2022, 5:41 PM IST

Updated : May 19, 2022, 5:50 PM IST

ಬೆಂಗಳೂರು: ರಾಜ್ಯದಾದ್ಯಂತ ಇಂದು ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಆನ್​ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ ಬರೆದು ಫೇಲ್ ಆದ ಅಭ್ಯರ್ಥಿಗಳು ಹಾಗೂ ಈ ಹಿಂದಿನ‌ ಎಲ್ಲ ಅರ್ಹ ಪುನರಾವರ್ತಿತ ಅಭ್ಯರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು. 2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದ್ದು, ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನ‌ ನೀಡಲಾಗುತ್ತೆ. ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..

  • 27-6-2022- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ
  • 28-6-2022- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
  • 29-6-2022- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
  • 30-6-2022- ಸಮಾಜ ವಿಜ್ಞಾನ
  • 01-7-2022- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್​​ಎಸ್​​ಕ್ಯೂಎಫ್​ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್​ನೆಸ್
  • 02-7-2022- ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್
  • 04-7-2022- ಗಣಿತ, ಸಮಾಜಶಾಸ್ತ್ರ

ಪರೀಕ್ಷಾ ಶುಲ್ಕದ ಮಾಹಿತಿ

  • ಒಂದು ವಿಷಯಕ್ಕೆ - 370 ರೂ.
  • ಎರಡು ವಿಷಯಕ್ಕೆ - 461 ರೂ.
  • ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು -620 ರೂ.
  • ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇದೆ.
    ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ‌ ಪ್ರಕಟ
    ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ‌ ಪ್ರಕಟ

ಸಹಾಯವಾಣಿ: ಪೂರಕ ಪರೀಕ್ಷೆಯ ನೋಂದಣಿ ಇತ್ಯಾದಿ‌ ವಿಷಯಗಳ ಕುರಿತು ಯಾವುದೇ ಮಾಹಿತಿ ಪಡೆಯಲು ಇಲಾಖೆ ಸಹಾಯವಾಣಿ ಆರಂಭಿಸಿದೆ. 080-23310075, 080-23310076, 080-23562267, 080- 23561271ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ: ಎಸ್ಎಸ್ಎಲ್​ಸಿ ಫಲಿತಾಂಶದ ಬೆನ್ನಲ್ಲೇ ಪಿಯುಸಿ ದಾಖಲಾತಿ ಆರಂಭ: ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ

Last Updated : May 19, 2022, 5:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.