ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ತಳವಾರ ಸಮುದಾಯಕ್ಕೆ ಎಸ್.ಟಿ ಪ್ರಮಾಣಪತ್ರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತಳವಾರ ಸಮುದಾಯದ ನಿಯೋಗದ ನೇತೃತ್ವ ವಹಿಸಿದ್ದ ಶಾಣಪ್ಪ ಪೀರಪ್ಪ ಕಣಮೇಶ್ವರ ತಂಡ ಮುಖ್ಯಮಂತ್ರಿಗಳ ನಿವಾಸದಲ್ಲಿ ಇಂದು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆ ಕೊಟ್ಟಿದ್ದಾರೆ.
ಸಿಎಂ ಬೊಮ್ಮಾಯಿ ಸಿಂದಗಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಳವಾರ ಸಮುದಾಯದ ಮುಖಂಡರು ತಳವಾರ ಜನಾಂಗಕ್ಕೆ ಕೇಂದ್ರ ಸರ್ಕಾರದ ಆದೇಶದಂತೆ ಎಸ್‌ಟಿ. ಪ್ರಮಾಣ ಪತ್ರ ನೀಡಬೇಕೆಂದು ಒತ್ತಡ ಹೇರಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಸೂಕ್ತ ದಾಖಲಾತಿಯೊಂದಿಗೆ ಸಮುದಾಯದ ನಿಯೋಗ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ತಿಳಿಸಿದ್ದರು.
ಈ ಹಿನ್ನಲೆಯಲ್ಲಿ ಶಾಣಪ್ಪ ಪೀರಪ್ಪ ಕಣಮೇಶ್ಚರ ನೇತೃತ್ವದ ನಿಯೋಗ, ಇಂದು ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಸೂಕ್ತ ದಾಖಲಾತಿ ದಾಖಲಾತಿ ಒದಗಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗಳು ಎಸ್.ಟಿ ಪ್ರಮಾಣ ಪತ್ರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಳವಾರ ಸಮಾಜದ ಅಧ್ಯಕ್ಷ ಶಾಣಪ್ಪ ಪೀರಪ್ಪ ಕಣಮೇಶ್ವರ್, ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಈಗಾಗಲೇ STಗೆ ಸೇರಿಸಬೇಕೆಂದು ಆದೇಶವಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ವಿಳಂಬ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಗಳನ್ನು ಸಿಂದಗಿ ಉಪ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಭೇಟಿ ಮಾಡಿ ಒತ್ತಡ ಹೇರಲಾಗಿತ್ತು.
ಮುಖ್ಯಮಂತ್ರಿಗಳ ಭರವಸೆಯಂತೆ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಪ್ರಮಾಣ ಪತ್ರ ನೀಡುವ ಬಗ್ಗೆ ಸಕರಾತ್ಮಕ ಭರವಸೆ ನೀಡಿದ್ದಾರೆ. ಈ ಬಾರಿಯ ಉಪ ಚುನಾವಣೆ ಯಲ್ಲಿ ತಳವಾರ ಸಮುದಾಯ ಅವರಿಗೆ ಬೆಂಬಲ ನೀಡಲಿದೆ ಎಂದು ತಿಳಿಸಿದರು.