ETV Bharat / state

ಸದ್ದಿಲ್ಲದೇ 'ಆಪರೇಷನ್ ಹಸ್ತ': ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ - ಈಟಿವಿ ಭಾರತ್​ ಕನ್ನಡ ನ್ಯೂಸ್

ಎಸ್.ಟಿ.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಬೆಂಬಲಿಗರು ಬಿಜೆಪಿ ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷ ಸೇರಿದರು.

ಎಸ್​ ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

author img

By ETV Bharat Karnataka Team

Published : Aug 21, 2023, 10:12 PM IST

ಬೆಂಗಳೂರು : 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ತೊರೆದು ತಮ್ಮ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಾಸಕರು ಬಿಜೆಪಿ ತೊರೆಯದಂತೆ ನಿಗಾ ವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಬೆನ್ನಲ್ಲೇ ಸದ್ದಿಲ್ಲದೇ 'ಆಪರೇಷನ್ ಹಸ್ತ' ಕಾರ್ಯಾಚರಣೆ ಬಿರುಸುಗೊಂಡಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯದಂತೆ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ಅನ್ಯಪಕ್ಷಗಳ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಸ್.ಟಿ.ಸೋಮಶೇಖರ್ ಅಪಾರ ಬೆಂಬಲಿಗರು ಬಿಜೆಪಿ ತೊರೆದು ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಮೊದಲ ಹಂತದಲ್ಲಿ ಆಪರೇಷನ್ ಹಸ್ತ ತಳಮಟ್ಟದಲ್ಲಿ ಪ್ರಾರಂಭವಾಗಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿಯ ಇನ್ನಷ್ಟು ಮಂದಿ ಪಕ್ಷ ಸೇರುವ ಸಾಧ್ಯತೆಗಳು ದಟ್ಟವಾಗಿವೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳು ಮತ್ತು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರುಗಳು ಕಾಂಗ್ರೆಸ್ ಸೇರ್ಪಡೆಯಾದರು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಡಿ.ಹನುಮಂತಯ್ಯ, ರಾಜ್ಯ ಜಿಲ್ಲಾ ಕ್ರಶರ್ ಮಾಲೀಕರ ಸಂಘದ ಅಧ್ಯಕ್ಷ ಡಿ. ಸಿದ್ದರಾಜು, ಅಜ್ಜಂನಹಳ್ಳಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷರಾದ ರುದ್ರಪ್ಪ ಕಾಂಗ್ರೆಸ್ ಸೇರಿದರು. ಶಾಸಕರುಗಳಾದ ಆನೇಕಲ್ ಶಿವಣ್ಣ, ಶ್ರೀನಿವಾಸ್ ಈ ಬೆಳವಣಿಗೆಗೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ನೀವು ಕಾರ್ಯಕರ್ತರು. ಮತದಾರರ ಮನ ಗೆಲ್ಲುವತ್ತ ಗಮನ ಹರಿಸಿ. ನಾಯಕರ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಸಲಹೆ ನೀಡಿದರು. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರ ಬದುಕನ್ನು ರೂಪಿಸುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳು ತಲುಪದ ಜನರನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಭಾರತ್ ಜೋಡೋ ಸಭಾಂಗಣದಲ್ಲಿ ನಾವೆಲ್ಲಾ ಜೊತೆಯಾಗಿದ್ದೇವೆ. ನಮ್ಮ ಬಂಧ ಗಟ್ಟಿಯಾಗಿ ಕೋಮುವಾದಿ ಶಕ್ತಿಗಳನ್ನು ಓಡಿಸೋಣ ಎಂದರು.

ಕಾಂಗ್ರೆಸ್ ಪಕ್ಷದ ರಕ್ತ ಸಾಮಾನ್ಯವಾದದ್ದಲ್ಲ ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ, ಕಾಂಗ್ರೆಸ್ಸಿಗನಾಗುವುದೆಂದರೆ ಅದು ಅಭಿಮಾನದ ಸಂಕೇತ. ಈ ರಾಷ್ಟ್ರ ಧ್ವಜ ಯಾರ ಹೆಗಲ ಮೇಲಿದೆ ಎಂದರೆ ಅದು ಕಾಂಗ್ರೆಸ್ಸಿಗರ ಹೆಗಲ ಮೇಲೆ ಮಾತ್ರ. ನಾವೆಲ್ಲ ಅಭಿಮಾನದಿಂದ ಕಾಂಗ್ರೆಸ್ಸಿಗರು ಎಂದು ಹೇಳಿಕೊಳ್ಳಬೇಕು. ಈ ದೇಶದ ಬಡ ಜನರಿಗೆ ಅನುಕೂಲವಾಗುವಂತಹ ನೀತಿಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಉಳುವವನೇ ಭೂಮಿಯ ಒಡೆಯ, ಬ್ಯಾಂಕ್‌ಗಳ ರಾಷ್ಟ್ರೀಕರಣ, ಪಡಿತರ ವ್ಯವಸ್ಥೆ, ಪಂಚಾಯತ್ ರಾಜ್ ಸೇರಿದಂತೆ ನಾವೆಲ್ಲಾ ಯಾವುದರ ಫಲಾನುಭವಿಗಳಾಗಿ ಬೆಳೆದಿದ್ದೇವೊ ಅದೆಲ್ಲ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಡಿಕೆಶಿ ಹೇಳಿದರು.

ಜನ ನೆನಪು ಮಾಡಿಕೊಳ್ಳುವಂತಹ ಒಂದೇ ಒಂದು ಕಾರ್ಯಕ್ರಮ ಕೊಟ್ಟಿಲ್ಲ ಬಿಜೆಪಿ. ಬರೀ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ. ಬಡವರ ಬಗ್ಗೆ ಚಿಂತೆ ಇಲ್ಲ, ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮೋದಿಯವರು ಗ್ಯಾಸ್ ಕೊಡುತ್ತೇನೆ ಎಂದು ಬಡ ಹೆಣ್ಣು ಮಕ್ಕಳ ಫೋಟೊ ಹಾಕಿದ್ದಷ್ಟೇ ಸಾಧನೆ. ಇದೇ ಕಾರಣಕ್ಕೆ ನಾವು ಜನರಿಂದ ಮಾಡುತ್ತಿರುವ ಲೂಟಿಯನ್ನು ತಡೆಯಲು ಗ್ಯಾರಂಟಿ ಯೋಜನೆಗಳನ್ನು ತಂದಿರುವುದು. ನೀವು ಇದನ್ನು ಮನೆ,‌ ಮನಗಳಿಗೆ ತಲುಪಿಸಬೇಕು.

ಇಂದಿರಾ ಕ್ಯಾಂಟೀನ್ ಎಂದು ಹೆಸರಿಡಬೇಕು ಎಂದು ಇದೇ ಎಸ್‌.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜು ಅವರು ಹಠ ಮಾಡಿ 40 ಜನ ಎಂಎಲ್‌ಎಗಳ ಸಹಿ ಹಾಕಿಸಿ ಕೊಟ್ಟಿದ್ದರು. ಅವರ ಕ್ಷೇತ್ರಗಳ ಜನರ ಮನೆಯ ಮೇಲೆ ಕಾಂಗ್ರೆಸ್ ಧ್ವಜದ ಚಿತ್ರಗಳನ್ನು ಹಾಕಿಸಿದ್ದರು. ಈಗ ಪೂರ್ತಿ ಕೇಸರಿ ಬಣ್ಣ ಬಳಿದಿದ್ದಾರೆ.

ಯುವ ಸಮಾವೇಶದ ಸಲುವಾಗಿ ದೆಹಲಿಗೆ ಹೋಗಿದ್ದಾಗ ಪ್ರಧಾನಿಗಳಾಗಿದ್ದ ರಾಜೀವ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲು ಕಾಯುತ್ತಿದ್ದೆವು, ಅಲ್ಲಿಗೆ ಹಿರಿಯ ನಾಯಕರೊಬ್ಬರು ಬಂದರು, ಅವರನ್ನು ಸ್ವತಃ ರಾಜೀವ್ ಗಾಂಧಿ ಅವರೇ ಹೋಗಿ ಕರೆದುಕೊಂಡು ಬಂದರು. ನಾವೆಲ್ಲ ಯಾರು ಎಂದು ಕುತೂಹಲದಿಂದ ಕೇಳಿದೆವು. ಅವರು ಬಾಬು ಜಗಜೀವನ್ ರಾಮ್. ನೆಹರು, ಇಂದಿರಾ ಗಾಂಧಿ ಅವರ ಜೊತೆ ಕೆಲಸ ಮಾಡಿದವರು. ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿದ್ದರು. ಈಗ ಪಕ್ಷಕ್ಕೆ ಮತ್ತೆ ಸೇರಬೇಕಂತೆ, ಕಾಂಗ್ರೆಸ್ಸಿಗನಾಗಿ ನಾನು ಪ್ರಾಣ ಬಿಡುವ ನನ್ನ ಆಸೆ ಎಂದು ಹೇಳಿದರಂತೆ ಈ ಘಟನೆ ಕೇಳಿದ ನಮಗೆ ಪಕ್ಷದಲ್ಲಿ ಇರುವ ನಾವೆಲ್ಲಾ ಪುಣ್ಯವಂತರು ಎಂದು ಅನಿಸಿತು ಎಂದು ಆ ದಿನಗಳನ್ನು ಡಿಕೆಶಿ ನೆನದರು.

ಪಕ್ಷ ಬಿಟ್ಟು ಹೋದವರನ್ನು ಕರೆ ತರಲು ಯತ್ನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸುತ್ತಿರುವ ಡಿ.ಕೆ. ಶಿವಕುಮಾರ್, ಇದಕ್ಕಾಗಿ ಪಕ್ಷ ಬಿಟ್ಟು ಹೋದವರನ್ನು ಕರೆ ತರಲು ಗಾಳ ಹಾಕಿದ್ದಾರೆ. ಈ ಮಧ್ಯೆ ಬಿಜೆಪಿಯ ಒಂದಷ್ಟು ಶಾಸಕರು ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ. ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕೊನೇ ಹಂತದಲ್ಲಿ ಯಡಿಯೂರಪ್ಪ ಅವರೇ ಮಧ್ಯ ಪ್ರವೇಶಿಸಿದ್ದಾರೆ.

ಕಾಂಗ್ರೆಸ್ -ಜೆಡಿಎಸ್ ತೊರೆದಿದ್ದ 17 ಶಾಸಕರ ಪೈಕಿ ಹೆಚ್ಚಿನವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರೆ 2024ರ ಲೋಕಸಭೆ ಚುನಾವಣೆಯಲ್ಲಿ ಸುಮಾರು 15 ರಿಂದ 20 ಲೋಕಸಭಾ ಸ್ಥಾನಗಳಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ. 2019ರಲ್ಲಿ ರಾಜ್ಯದಲ್ಲಿ ಗೆದ್ದಿದ್ದ 26 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಲು ಪಕ್ಷಕ್ಕೆ ಕಷ್ಟವಾಗಲಿದೆ.

ಕಾಂಗ್ರೆಸ್ ಸೇರಲು ಮನಸ್ಸು ಮಾಡಿರುವ ಎಸ್‌.ಟಿ.ಸೋಮಶೇಖರ್‌ ಅವರನ್ನು ಸಮಾಧಾನಪಡಿಸಲು ಹಲವು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ತಮ್ಮನ್ನು ಸೋಲಿಸಲು ಜೆಡಿಎಸ್ ನಾಯಕರೊಂದಿಗೆ ಕೈ ಜೋಡಿಸಿದ್ದರು ಎಂದು ಸೋಮಶೇಖರ್ ನೀಡಿದ ದೂರಿನ ಮೇರೆಗೆ ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ ಹಾಗೂ ಯಶವಂತಪುರ ಮಂಡಲದ ಉಪಾಧ್ಯಕ್ಷ ಧನಂಜಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಆದರೆ ಇದಕ್ಕೆ ಎಸ್.ಟಿ. ಸೋಮಶೇಖರ್ ತೃಪ್ತರಾಗಿಲ್ಲ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿರುವ ಶೋಭಾ ಕರಂದ್ಲಾಜೆ ಚುನಾವಣೆಗೆ ಮುನ್ನ ಪಕ್ಷದಿಂದ ಹೊರ ಹೋದವರನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಮಾತು ಕೇಳಿ ಪಕ್ಷದಲ್ಲಿ ಉಳಿಯಲು ಈ ಶಾಸಕರಿಗೆ ಯಾವುದೇ ಪ್ರಬಲ ಕಾರಣವಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ. ಅವರು ಅವಕಾಶವಾದಿಗಳು ಎಂದು ಬಿಜೆಪಿ ನಾಯಕರು ದೂರುತ್ತಿದ್ದಾರೆ.

ಇದನ್ನೂ ಓದಿ : ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.