ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಯಶವಂತಪುರ ಕ್ಷೇತ್ರ ಪ್ರಚಾರ ವೇಳೆ ಮಾತನಾಡಿದ ಅವರು, ಸೋಮಶೇಖರ್ ನಿರ್ಗತಿಕರಾಗ್ತಾರೆ ಎಂಬ ದಿನೇಶ್ ಗುಂಡೂರಾವ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ದಿನೇಶ್ ಗುಂಡೂರಾವ್ ರಾಜ್ಯದ ಮಹಾನ್ ಸಿಎಂ ಗುಂಡೂರಾಯರ ಮಗ. ನಾನೊಬ್ಬ ಸಾಮಾನ್ಯ ಇನ್ಸ್‌ಪೆಕ್ಟರ್ ಮಗ. ದಿನೇಶ್ ಗುಂಡೂರಾವ್ ರೀತಿ ನನಗೆ ಯಾವುದೇ ಪೊಲಿಟಿಕಲ್ ಬ್ಯಾಕ್‌ಗ್ರೌಂಡ್ ಇಲ್ಲ ಎಂದು ಟಾಂಗ್ ನೀಡಿದರು.
ದಿನೇಶ್ ಗುಂಡೂರಾವ್ ಸ್ಟೇಟ್ ಲೆವೆಲ್ ಲೀಡರ್ ಆಗಿದ್ದಾರೆ. ಅವರು ಅಧ್ಯಕ್ಷರಾದ ಮೇಲೆ ಕಾಂಗ್ರೆಸ್ ತುಂಬಾ ಬೆಳೆದಿದೆ. ಅವರ ಎತ್ತರಕ್ಕೆ ನಾನಿನ್ನೂ ಬೆಳೆದಿಲ್ಲ. ಅವರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಕ್ಷೇತ್ರದ ಜನರಿಗೆ ಮಾತ್ರ ಉತ್ತರ ಕೊಡ್ತೇನೆ ಎಂದು ದಿನೇಶ್ ಬಗ್ಗೆ ವ್ಯಂಗ್ಯವಾಡಿದರು.
ಇಂದು ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಬರುತ್ತಿದ್ದಾರೆ. 15 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದಂತೆ ನನ್ನ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತಿದ್ದಾರೆ. 30ನೇ ತಾರೀಖು ಮತ್ತೊಮ್ಮೆ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ನನ್ನ ಕ್ಷೇತ್ರಕ್ಕೆ ಸಿಎಂ ಕೊಟ್ಟ ಅನುದಾನದ ಬಗ್ಗೆ ಅವರೇ ಮಾತನಾಡಲಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.