ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಪಡೆದರು. ಕಳೆದ ಬಾರಿಗಿಂತಲೂ ಅಧಿಕ ಅಂತರದಿಂದ ಜಯಗಳಿಸಿದ ಸೋಮಶೇಖರ್ ಆರ್.ವಿ.ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಚುನಾವಣಾಧಿಕಾರಿ ನವೀನ್ ಜೋಸೆಫ್ ರಿಂದ ಪ್ರಮಾಣ ಪತ್ರ ಪಡೆದರು.
ಈ ವೇಳೆ ರಾಜರಾಜೇಶ್ವರಿ ನಗರ ಅನರ್ಹ ಶಾಸಕ ಮುನಿರತ್ನ, ಮಸ್ಕಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಾತ್ ನೀಡಿದರು.
ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್ ಯಶೋಗಾಥೆ ಮುಂದುವರಿಸಿದ್ದು, ತಮ್ಮ ನಿಕಟ ಪ್ರತಿಸ್ಪರ್ಧಿ ಜೆಡಿಎಸ್ ನ ಜವರಾಯಿಗೌಡ ವಿರುದ್ಧ 27,843 ಮತಗಳ ಅಂತರದಿಂದ ಗೆಲುವು ಸಾಧಿಸಿದರು.