ETV Bharat / state

ಒಕ್ಕಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಜ.23 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ - ಒಕ್ಕಲಿಗರ ಬೃಹತ್ ಶಕ್ತಿ ಪ್ರದರ್ಶನ

1994 ರಲ್ಲಿ ಒಕ್ಕಲಿಗರ ಮೀಸಲಾತಿಗಾಗಿ ಬೃಹತ್ ಪ್ರಮಾಣದಲ್ಲಿ ನಗರದಲ್ಲಿ ಒಕ್ಕಲಿಗರ ಸಮಾವೇಶ ನಡೆಸಲಾಗಿತ್ತು. ಆ ನಂತರ ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಾದರು. ಈಗ ಮತ್ತೆ ಅದೇ ರೀತಿಯ ಸಮಾವೇಶ ನಡೆಸುವ ಮೂಲಕ ಒಕ್ಕಲಿಗ ಸಮುದಾಯದ ಒಗ್ಗಟ್ಟು ಹಾಗೂ ಶಕ್ತಿ ಪ್ರದರ್ಶನ ಮಾಡುವ ಉದ್ದೇಶವನ್ನು ಸಮುದಾಯದವರು ಹೊಂದಿದ್ದಾರೆ.

ಒಕ್ಕಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಜ.23 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ
stage-is-set-for-the-show-of-power-of-the-okkaliga-convention-in-bangalore
author img

By

Published : Nov 29, 2022, 7:37 PM IST

ಬೆಂಗಳೂರು : ಮುಂಬರುವ ವಿಧಾನಸಭೆಗೂ ಮುನ್ನ ರಾಜ್ಯದಲ್ಲಿ ಒಕ್ಕಲಿಗರ ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ರಾಜಕೀಯವಾಗಿ ಸಂದೇಶ ರವಾನಿಸುವುದು ಇದರ ಉದ್ದೇಶವಾಗಿದೆ.

ರಾಜ್ಯ ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಎರಡು ಪ್ರಬಲ ಒಕ್ಕಲಿಗ ಹಾಗೂ ಲಿಂಗಾಯಿತ ಪಂಚಮಸಾಲಿ ಸಮುದಾಯಗಳು ಮೀಸಲಾತಿ ಹೋರಾಟಕ್ಕೆ ಇಳಿದಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಹೋರಾಟಗಳು ಇನ್ನಷ್ಟು ಗರಿಗೆದರುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

1994 ರಲ್ಲಿ ಒಕ್ಕಲಿಗರ ಮೀಸಲಾತಿಗಾಗಿ ಬೃಹತ್ ಪ್ರಮಾಣದಲ್ಲಿ ನಗರದಲ್ಲಿ ಒಕ್ಕಲಿಗರ ಸಮಾವೇಶ ನಡೆಸಲಾಗಿತ್ತು. ಆ ನಂತರ ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಾದರು. ಈಗ ಮತ್ತೆ ಅದೇ ರೀತಿಯ ಸಮಾವೇಶ ನಡೆಸುವ ಮೂಲಕ ಒಕ್ಕಲಿಗ ಸಮುದಾಯದ ಒಗ್ಗಟ್ಟು ಹಾಗೂ ಶಕ್ತಿ ಪ್ರದರ್ಶನ ಮಾಡುವ ಉದ್ದೇಶವನ್ನು ಸಮುದಾಯದವರು ಹೊಂದಿದ್ದಾರೆ.

ಈ ಸಮಾವೇಶಕ್ಕೆ 2023ರ ಜನವರಿ 23ರಂದು ದಿನಾಂಕ ನಿಗದಿಪಡಿಸಲಾಗಿದೆ. ನಾಗರಿಕರಿಗೆ ಸಂಚಾರ ದಟ್ಟಣೆಯ ತೊಂದರೆಯಾಗದಂತೆ ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಸಮಾವೇಶ ನಡೆಸಿ ಇಬ್ಬರು ನಾಯಕರನ್ನು ಸನ್ಮಾನಿಸುವುದರ ಜೊತೆಗೆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳು ಹಾಗೂ ಪರಿಹಾರೋಪಾಯದ ಬಗ್ಗೆ ಸಮಾಲೋಚನೆ ನಡೆಸಲು ಉದ್ದೇಶಿಸಲಾಗಿದೆ.

ಇದೇ ವೇಳೆ, 90 ವರ್ಷ ತುಂಬಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಒಕ್ಕಲಿಗ ಸಮುದಾಯದಿಂದ ಗೌರವ ಸಮರ್ಪಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಇಬ್ಬರು ನಾಯಕರನ್ನು ಗೌರವಿಸುವ ಸಮಾರಂಭವನ್ನು ಬೃಹತ್ ಪ್ರಮಾಣದಲ್ಲಿ ಆಯೋಜಿಸಿ ಶಕ್ತಿ ಪ್ರದರ್ಶನ ನಡೆಸಲಾಗುತ್ತದೆ. ಒಕ್ಕಲಿಗರ ಮಹಾಸಂಗಮದ ಹೆಸರಿನಲ್ಲಿ ಅದ್ದೂರಿಯಾಗಿ ಹಾಗೂ ಬೃಹತ್ ಪ್ರಮಾಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಂಘದ ನೇತೃತ್ವದಲ್ಲಿ ಈ ಬೃಹತ್ ಸಮಾವೇಶ: ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಈ ಬೃಹತ್ ಸಮಾವೇಶವನ್ನು ಆಯೋಜಿಸಲಿದ್ದು, ಸಮುದಾಯದ ಎಲ್ಲಾ ಸಂಘ-ಸಂಸ್ಥೆಗಳು ಕೈಜೋಡಿಸುವಂತೆ ಕರೆ ನೀಡಲಾಗಿದೆ. ಜನವರಿ 23ರ ವೇಳೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಲಿಂಗೈಕ್ಯರಾಗಿ ಹತ್ತು ವರ್ಷವಾಗಲಿದ್ದು, ಅವರ ಸಂಸ್ಮರಣೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುತ್ತದೆ.

ಇದರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಪಟ್ಟಾಭಿಷಕ್ತರಾಗಿ ಜ. 20 ಕ್ಕೆ ಹತ್ತು ವರ್ಷಗಳಾಗಲಿವೆ. ಈ ಮೂರು ಕಾರ್ಯಕ್ರಮಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹಾಸಂಗಮವನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ಜನಾಂಗವನ್ನು ಸಂಘಟಿಸಲಾಗುತ್ತದೆ.

ಆದಿಚುಂಚನಗಿರಿ ಶ್ರೀಗಳು ಹಾಗೂ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಈ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಸರ್ಕಾರಕ್ಕೆ ನಂಜಾವಧೂತ ಶ್ರೀ ಎಚ್ಚರಿಕೆ: ಜ. 23ರ ಒಳಗೆ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸುವ ಘೋಷಣೆ ಹೊರಬೀಳಬೇಕು ಎಂದು ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಒಕ್ಕಲಿಗರ ಸಂಘದ ಸಭೆಯಲ್ಲಿ ಎಚ್ಚರಿಸಿದ್ದರು. ಎಸ್​ಸಿ-ಎಸ್​ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದೀರಿ. ನಮಗೂ ನಮ್ಮ ಹಕ್ಕು ಕೊಡಿ. ರಾಜ್ಯದ ಜನಸಂಖ್ಯೆಯಲ್ಲಿ ಶೇ 16 ರಷ್ಟು ಇರುವ ನಮಗೆ ಶೇ 15 ರಷ್ಟು ಮೀಸಲಾತಿ ಬೇಕು. ನಗರ ಪ್ರದೇಶ, ಆರ್ಥಿಕ ಹಿಂದುಳಿದ ವರ್ಗ ಮೀಸಲಾತಿಯಡಿ ನಮಗೂ ಅವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಪಕ್ಷಾತೀತವಾಗಿ ಸಮುದಾಯದ ಎಲ್ಲ ನಾಯಕರು, ಮುಖಂಡರು, ಸಂಘ - ಸಂಸ್ಥೆಗಳು ಒಟ್ಟಾಗಿ ಸಮಾವೇಶ ನಡೆಸುವ ಮೂಲಕ ಸ್ಪಷ್ಟವಾದ ರಾಜಕೀಯ ಸಂದೇಶ ನೀಡಬೇಕು. ಒಂದು ವೇಳೆ ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಅಷ್ಟರಲ್ಲಿ ಸರ್ಕಾರ ಹೆಚ್ಚಿಸದಿದ್ದರೆ, ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗವುದು. ಎಲ್ಲ ಸಮುದಾಯಗಳು ಅವರವರ ಹಕ್ಕುಗಳಿಗೆ, ಬೇಡಿಕೆಗಳಿಗೆ ಸಂಘಟಿತರಾಗಿ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯವು ಎಚ್ಚೆತ್ತು ಸಂಘಟಿತ ಹೋರಾಟಕ್ಕೆ ಸಜ್ಜಾಗುವಂತೆ ಸಮುದಾಯದ ನಾಯಕರು ಈಗಾಗಲೇ ಕರೆ ನೀಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಸ್. ಎಂ ಕೃಷ್ಣ ಇಬ್ಬರು ಸಮಾಜದ ಕಣ್ಣು. ಜನವರಿ 23 ರಂದು ಇಬ್ಬರಿಗೂ ಸಮಾಜದ ವತಿಯಿಂದ ಸನ್ಮಾನ ಮಾಡುತ್ತೇವೆ. ನಮ್ಮ ಸಮಾಜಕ್ಕೆ ಡಬಲ್ ಇಂಜಿನ್ ಸರ್ಕಾರ ಸಿಹಿ ಸುದ್ದಿ ಕೊಡಬೇಕು. ಜನವರಿ 23 ಕಡೆಯ ದಿನ. ಸರ್ಕಾರ ನಮಗೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟ ಆರಂಭವಾಗಲಿದೆ ಎಂದು ಶ್ರೀಗಳು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.