ETV Bharat / state

ವಿರೋಧದ ನಡುವೆಯೂ ಇಂದು ನಡೆಯಲಿರುವ ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆ

ಇಂದು ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆ ನಡೆಯಲಿದೆ. ಈ ಕುರಿತಾಗಿ ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷಗುಪ್ತ ಆಧಿಸೂಚನೆ ಹೊರಡಿಸಿದ್ದಾರೆ.

ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆ
ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆ
author img

By

Published : Dec 4, 2019, 4:58 AM IST

ಬೆಂಗಳೂರು: ಇಂದು ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆ ನಡೆಯಲಿದೆ. ಈ ಕುರಿತಾಗಿ ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷಗುಪ್ತ ಆಧಿಸೂಚನೆ ಹೊರಡಿಸಿದ್ದಾರೆ.

ಅಧಿಸೂಚನೆ ಪ್ರಕಾರ 8 ಗಂಟೆಯಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿ, 11:30ರ ವೇಳೆಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 5ರಂದು ರಾಜ್ಯ ವಿಧಾನಸಭೆಯ ಉಪಚುನಾವಣೆ ನಡೆಯುವ ಹಿನ್ನೆಲೆ, ಇದಕ್ಕೆ ಮೂರೂ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಸಹಕಾರ ನೀಡುವುದು ಅನುಮಾನ ಎನ್ನಲಾಗುತ್ತಿದೆ.

ಪಾಲಿಕೆಯ ಮೂರು ಪಕ್ಷಗಳ ಸದಸ್ಯರೂ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿ, ಇಂದು ಮನೆಮನೆಗೆ ಪ್ರಚಾರ ನಡೆಸಲಿರುವುದರಿಂದ ಸ್ಥಾಯಿ ಸಮಿತಿ ಚುನಾವಣೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪ್ರಾದೇಶಿಕ ಚುನಾವಣಾ ಆಯುಕ್ತರು ಚುನಾವಣೆ ಮುಂದೂಡದ ಹಿನ್ನೆಲೆ, ಚುನಾವಣೆಗೆ ಗೈರಾಜರಾಗುವ ಮೂಲಕ ವಿರೋಧ ವ್ಯಕ್ತಪಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Intro:ಸ್ಥಾಯಿ ಸಮಿತಿಗಳ ಚುನಾವಣೆ ನಡೆದರೂ, ಸದಸ್ಯರ ಆಯ್ಕೆಯಾಗೋದು ಅನುಮಾನ!

ಬೆಂಗಳೂರು: ಡಿಸೆಂಬರ್ ಐದರಂದು ಉಪಚುನಾವಣೆ ಇರುವ ಹಿನ್ನಲೆ, ನಾಳೆ ನಡೆಯಲಿರುವ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಮುಂದೂಡುವಂತೆ, ಜನಪ್ರತಿನಿಧಿಗಳು ಎಷ್ಟೇ ಒತ್ತಡ ಹೇರಿದ್ದರೂ, ತಂತ್ರ ಫಲಿಸಲಿಲ್ಲ. ನಾಳೆಯೇ ಚುನಾವಣೆ ನಡೆಸುವುದಾಗಿ ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷಗುಪ್ತ ಆಧಿಸೂಚನೆ ಹೊರಡಿಸಿದ್ದಾರೆ. ಆ ಪ್ರಕಾರ ೮ ಗಂಟೆಯಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿ, 11:30 ರ ವೇಳೆಗೆ ಚುನಾವಣೆ ನಡೆಯಲಿದೆ. ಆದರೆ ಇದಕ್ಕೆ ಮೂರೂ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಸಹಕಾರ ನೀಡೋದು ಅನುಮಾನ ಎನ್ನಲಾಗುತ್ತಿದೆ.
ಪಾಲಿಕೆಯ ಮೂರು ಪಕ್ಷಗಳ ಸದಸ್ಯರೂ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿ, ಬುಧವಾರ ಮನೆಮನೆ ಪ್ರಚಾರ ನಡೆಸಲಿರುವುದರಿಂದ ಸ್ಥಾಯಿ ಸಮಿತಿ ಚುನಾವಣೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪ್ರಾದೇಶಿಕ ಚುನಾವಣಾ ಆಯುಕ್ತರು ಚುನಾವಣೆ ಮುಂದೂಡದ ಹಿನ್ನೆಲೆ, ಚುನಾವಣೆಗೆ ಗೈರಾಜರಾಗುವ ಮೂಲಕ ವಿರೋಧ ವ್ಯಕ್ತಪಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಚುನಾವಣೆ ನಡೆಸುವುದಕ್ಕೆ ಕೋರಂ ಕಡಿಮೆಯಾದರೆ, ಚುನಾವಣೆ ಮತ್ತೆ ಮುಂದಕ್ಕೆ ಹೋಗಲಿದೆ.
ಸೌಮ್ಯಶ್ರೀ
Kn_bng_04_bbmp_standing_Commitee_7202707Body:...Conclusion:...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.