ಬೆಂಗಳೂರು : ಲೆಕ್ಕ ಕೊಡಿ ಅಭಿಯಾನದಡಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ತಿವಿಯುವ ಕೆಲಸ ಮಾಡಿದ್ದಾರೆ.
ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲಾಗುತ್ತಿವೆ. ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಕೇಂದ್ರ ಸಚಿವ ಹರ್ಷವರ್ಧನ್ ಅವರ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ ಸರ್ಕಾರ ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾದಿಂದ ಸಾಯುವವರ ಸಂಖ್ಯೆ ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣ 57,396. ಲಭ್ಯ ಇರುವ ವೆಂಟಿಲೇಟರ್ಗಳು ಕೇವಲ 801. ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರ ಸಂಪರ್ಕವಿದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಜನರ ಕಷ್ಟದ ಕಾಲದಲ್ಲಿ ಪ್ರತಿಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದಿದ್ದಾರೆ.
-
ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.
— Siddaramaiah (@siddaramaiah) August 2, 2020 " class="align-text-top noRightClick twitterSection" data="
ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ.
ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
11/12#lekkakodi
">ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.
— Siddaramaiah (@siddaramaiah) August 2, 2020
ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ.
ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
11/12#lekkakodiನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.
— Siddaramaiah (@siddaramaiah) August 2, 2020
ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ.
ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
11/12#lekkakodi
ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಬಿಜೆಪಿ ಸಂಸದರು ಯಾಕೆ ಸಹಕಾರ ಕೊಡಲಿಲ್ಲ? ರಾಜಸ್ಥಾನದ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ? ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ ಆಗಲಾರದೇ? ಎಂದು ಪ್ರಶ್ನಿಸಿದ್ದಾರೆ.
ಬೆಡ್ ಇಲ್ಲ, ಔ಼ಷಧಿ, ಊಟ ಕೊಡ್ತಿಲ್ಲ, ಆ್ಯಂಬುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರೂ ಸತ್ತಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ನಾವು ಸುಮ್ಮನಿರಬೇಕಾ? ಎಂದು ಕೇಳಿದ್ದಾರೆ.
ರಾಜ್ಯದ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆ್ಯಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ. ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡು ಕಾಣ್ತು. ಅಕ್ರಮದ ಬಗ್ಗೆ ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದರೆ "ಮಾಹಿತಿ ಕೊಡಿ’’ ಎನ್ನುತ್ತಾರೆ. ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ. ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ? ಎಂದು ಹೇಳುವ ಮೂಲಕ ಜನರ ಮುಂದೆ ತೆರಳುತ್ತೇವೆ ಎಂಬ ಸೂಚನೆ ನೀಡಿದ್ದಾರೆ.
24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿ 24 ದಿನ ಕಳೆದು ಹೋಗಿದೆ. ಈವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ? ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆ ಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟಿಸ್ ಕೊಟ್ಟು ರಾಜ್ಯ ಬಿಜೆಪಿ ಸರ್ಕಾರ ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ಎಂದಿದ್ದಾರೆ.