ETV Bharat / state

ಸಿದ್ದರಾಮಯ್ಯ,ಡಿಕೆಶಿ ನಿವಾಸಕ್ಕೆ ರಾಜ್ಯ - ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಭೇಟಿ: ಪರಸ್ಪರ ಮುನಿಸು ನಿವಾರಣೆಗೆ ಯತ್ನ?! - Siddaramaiah

ಮೈಸೂರು ಮೇಯರ್ ಆಯ್ಕೆಯಲ್ಲಿ ಕಾಂಗ್ರೆಸ್​ಗೆ ಆಗಿರುವ ಹಿನ್ನಡೆಯ ಸಂಬಂಧ ಪಾಲಿಕೆ ಸದಸ್ಯರು ಹಾಗೂ ಮೈಸೂರು ಜಿಲ್ಲಾ ಮುಖಂಡರ ಜತೆ ಚರ್ಚಿಸಲು ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿಗೌಡ ಇಂದು ಭೇಟಿ ನೀಡಲಿದ್ದು, ಮೈಸೂರಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

DK Shivakumar
ಸಿದ್ದು-ಡಿಕೆಶಿ
author img

By

Published : Mar 2, 2021, 1:11 PM IST

ಬೆಂಗಳೂರು: ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ವಿವಿಧ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಭೇಟಿಕೊಟ್ಟು ಚರ್ಚಿಸಿ ತೆರಳಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ತೀವ್ರವಾಗಿ ಕಂಡು ಬರುತ್ತಿರುವ ಬೆಳವಣಿಗೆಗಳ ಹಿನ್ನೆಲೆ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರುಗಳು ಸಿದ್ದರಾಮಯ್ಯ ಹಾಗೂ ಡಿಕೆಶಿ ನಿವಾಸಕ್ಕೆ ನಿರಂತರವಾಗಿ ಭೇಟಿ ಕೊಡುತ್ತಿದ್ದು, ಪಕ್ಷದಲ್ಲಿ ಉಂಟಾಗಿರುವ ಗೊಂದಲ ಹಾಗೂ ನಾಯಕರ ನಡುವಿನ ಆಂತರಿಕ ತಿಕ್ಕಾಟಕ್ಕೆ ಪರಿಹಾರ ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

ಮೈಸೂರು ಮೇಯರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್​ಗೆ ಆಗಿರುವ ಹಿನ್ನಡೆ ಹಾಗೂ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನದ ಅತ್ಯಂತ ವ್ಯವಸ್ಥಿತವಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಆಂತರಿಕ ಸಮರ ಬುಗಿಲೆದ್ದಿದೆ ಎಂಬ ಮಾತು ಕೇಳಿಬರುತ್ತಿದೆ.

ಮೈಸೂರು ಮೇಯರ್ ಆಯ್ಕೆಯಲ್ಲಿ ಕಾಂಗ್ರೆಸ್​ಗೆ ಆಗಿರುವ ಹಿನ್ನಡೆಯ ಸಂಬಂಧ ಪಾಲಿಕೆ ಸದಸ್ಯರು ಹಾಗೂ ಮೈಸೂರು ಜಿಲ್ಲಾ ಮುಖಂಡರ ಜತೆ ಚರ್ಚಿಸಲು ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿಗೌಡ ಇಂದು ಭೇಟಿ ನೀಡಲಿದ್ದು, ಮೈಸೂರಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ​ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಕಂಡು ಬರುತ್ತಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಸಹ ಇಲ್ಲಿನ ಚುನಾವಣೆ ವಿಚಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಹಿನ್ನೆಲೆ ತಮಿಳುನಾಡಿನ ಕಾಂಗ್ರೆಸ್ ಪಕ್ಷದ ನಾಯಕರಾದ ಗೋಪಿನಾಥ್ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಚುನಾವಣೆ ಹಾಗೂ ಪ್ರಚಾರ ಮತ್ತು ಗೆಲುವಿನ ತಂತ್ರಗಾರಿಕೆ ಕುರಿತು ಇದೇ ಸಂದರ್ಭ ಅವರು ಸಿದ್ದರಾಮಯ್ಯ ಜೊತೆ ಚರ್ಚಿಸಿದರು. ಇದಾದ ಬಳಿಕ ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿಗೌಡ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಡಿಕೆಶಿ ನಿವಾಸ ಬೆಳವಣಿಗೆ: ಎಐಸಿಸಿ ಕಾರ್ಯದರ್ಶಿ ಮಧು ಯಕ್ಷಿಗೌಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರಸ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಡಿಕೆಶಿ ಬಳಿಕ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಕೂಡಾ ಹಾಜರಿದ್ದರು.

ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಗೊಂದಲ ಹಾಗೂ ರಾಜ್ಯ ನಾಯಕರ ನಡುವಿನ ಸಾಮರಸ್ಯದ ಕೊರತೆ ನಿವಾರಣೆಗೆ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಪ್ರಯತ್ನ ಆರಂಭಿಸಿದ್ದು, ಮುನಿಸಿಕೊಂಡಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಬಾಂಧವ್ಯ ವೃದ್ಧಿಗೆ ಯಾವ ರೀತಿಯ ಪರಿಹಾರ ಕಂಡುಕೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.