ETV Bharat / state

ಕೋವಿಡ್‌ ಸಂದರ್ಭದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

ಸ್ಟೆಪ್ ಒನ್ ಸಂಸ್ಥೆಯು ಕೋವಿಡ್ ಹೋರಾಟದಲ್ಲಿ ಸರ್ಕಾರದೊಂದಿಗೆ ಭಾಗಿಯಾಗಿ ಸಾವಿರಾರು ವೈದ್ಯರೊಂದಿಗೆ ಕೆಲಸ ಮಾಡಿ ಹೋಂ ಐಸೋಲೇಶನ್ ಕ್ರಮ ಯಶಸ್ವಿಯಾಗಲು ನೆರವಾಗಿದೆ. ಇದರಿಂದಾಗಿ ರಾಜ್ಯವು ದೇಶದಲ್ಲೇ ಮಾದರಿಯಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Minister Dr. K. Sudhakar
ಸಚಿವ ಡಾ.ಕೆ.ಸುಧಾಕರ್
author img

By

Published : Jan 16, 2022, 7:07 AM IST

ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದೆ. ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕವೇ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್​ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೋವಿಡ್ ಮೊದಲ ಅಲೆಯಲ್ಲಿ ಆರೋಗ್ಯ ಸಿಬ್ಬಂದಿಗೆ ಹೊಸ ವೈರಾಣು ಕುರಿತು ತರಬೇತಿ ನೀಡಬೇಕಿತ್ತು. ಆದರೆ ಲಾಕ್ ಡೌನ್ ಮೊದಲಾದ ಕಾರಣಗಳಿಂದಾಗಿ ತರಬೇತಿ ನೀಡಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ನೆರವಿನಲ್ಲಿ ತಂತ್ರಜ್ಞಾನ ಬಳಸಿ 2.5 ಲಕ್ಷ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಈ ಬಗೆಯ ಪರಿಣಾಮಕಾರಿ ತಂತ್ರಜ್ಞಾನ ಬಳಕೆಯನ್ನು ಕೇಂದ್ರ ಸರ್ಕಾರ ಕೂಡ ಗುರುತಿಸಿದೆ.

5ಟಿ ಕ್ರಮವನ್ನು ಕೂಡ ಯಶಸ್ವಿಯಾಗಿ ಜಾರಿ ಮಾಡಲಾಗಿದೆ. 3ನೇ ಅಲೆಯಲ್ಲಿ 2-3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದರೂ ತೀವ್ರತೆ ಕಡಿಮೆ ಇದೆ. ಶೇ 93ರಷ್ಟು ರೋಗಿಗಳು ಮನೆ ಐಸೋಲೇಶನ್​ನಲ್ಲೇ ಇದ್ದಾರೆ. 5 ರಿಂದ 6ರಷ್ಟು ಜನರು ಆಸ್ಪತ್ರೆ ಹಾಗೂ ಶೇ 1 ರಷ್ಟು ಜನರು ಕೋವಿಡ್ ಕೇರ್ ಸೆಂಟರ್​​ನಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

10 ಸಾವಿರ ಸಿಬ್ಬಂದಿ ನಿಯೋಜನೆ:

ಈ ಸಮಯದಲ್ಲಿ ಹೋಂ ಐಸೋಲೇಶನ್‌ನಲ್ಲಿರುವವರ ಆರೋಗ್ಯದ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ.

2ನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು. 42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ವಿವರಿಸಿದರು.

ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಸಚಿವ ಸುಧಾಕರ್​​ ಹೇಳಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ ಸ್ತಬ್ಧಚಿತ್ರ ಮೆರವಣಿಗೆ: ದಕ್ಷಿಣ ಭಾರತದಲ್ಲಿ ಕರ್ನಾಟಕಕ್ಕೆ ಮಾತ್ರ ಸ್ಥಾನ - ಸಿಎಂ ಸಂತಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.