ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ನಳಿನ್ ಕುಮಾರ್ ಕಟೀಲ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಕೋರ್ ಕಮಿಟಿ ಸಭೆ ಇದಾಗಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆ ಸಂಘಟನಾತ್ಮಕ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಪದಾಧಿಕಾರಿಗಳ ನೇಮಕದಲ್ಲಿ ರಾಜ್ಯಾಧ್ಯಕ್ಷರು ಕೋರ್ ಕಮಿಟಿ ಸದಸ್ಯರನ್ನ ವಿಶ್ವಾಸಕ್ಕೆ ತಗೆದುಕೊಳ್ಳುತ್ತಿಲ್ಲ ಎನ್ನುವ ಆರೋಪ ಬಂದಿತ್ತು. ಹಾಗಾಗಿ ಈ ವಿಚಾರ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರಲಿದೆ.
ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ನೇಮಕ ಹಾಗೂ ರಾಜ್ಯ ಪದಾಧಿಕಾರಿಗಳ ನೇಮಕ ವಿಚಾರವೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರಲಿದೆ.