ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ನಲ್ಲಿ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಮತ್ತು ಉಚಿತ ಬಸ್ ಪಾಸ್ ನೀಡುವಂತೆ ಘೋಷಣೆ ಮಾಡಬೇಕು. ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು 3500 ರೂ.ಗೆ ಹೆಚ್ಚಿಸಬೇಕು. ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% ಅನುದಾನ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ.
ಇದೇ 5ರಂದು ರಾಜ್ಯ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಹೀಗಾಗಿ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವಂತೆ ಒತ್ತಾಯಿಸಲಾಗುತ್ತಿದೆ. ಇನ್ನು ಇದರ ಸಂಬಂಧ ಮಾರ್ಚ್ 3ರಂದು ರಾಜ್ಯಾದ್ಯಂತ ಸಚಿವರು, ಶಾಸಕರ ಕಚೇರಿ/ಮನೆ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲು ಎಸ್ಎಫ್ಐ ಸಂಘಟನೆ ನಿರ್ಧರಿಸಿದೆ.
ಇತ್ತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನ ಬಜೆಟ್ ಬಗ್ಗೆ ಕೇಳಿದರೆ, ಸಾಕಷ್ಟು ಯೋಜನೆಗಳನ್ನ ಕೊಟ್ಟಿದ್ದೇವೆ. ಅದಷ್ಟು ಬೇಗ ಈಡೇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.