ಬೆಂಗಳೂರು: ಪಕ್ಷದಲ್ಲಿನ ಆಂತರಿಕ ಸಮಸ್ಯೆಗೆ ತೆರೆ ಎಳೆಯಲು ಹೈಕಮಾಂಡ್ ಪ್ರತಿನಿಧಿಯಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಚಿವರು, ಶಾಸಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಪಕ್ಷ ಅಧಿಕೃತ ಮಾಹಿತಿ ನೀಡಿದೆ.
ಬುಧವಾರ ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವ ಅವರು, ಬಳಿಕ 4.45ಕ್ಕೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ತೆರಳುವರು. ಅಲ್ಲಿ ಸಂಜೆ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು. ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪಕ್ಷದ ಕಾರ್ಯಾಲಯ ಮಾಹಿತಿ ನೀಡಿದೆ.
ಗುರುವಾರ ಆಯ್ದ ಶಾಸಕರ ಸಭೆ ನಡೆಸಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹದ ನಂತರ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ನಂತರ ವರದಿಯನ್ನು ಸಿದ್ದಪಡಿಸಿಕೊಂಡು ದೆಹಲಿಗೆ ವಾಪಸ್ಸಾಗಲಿದ್ದಾರೆ, ರಾಜ್ಯ ಘಟಕದಲ್ಲಿನ ಎಲ್ಲ ವಿದ್ಯಮಾನಗಳ ಕುರಿತು ವಿಸ್ತೃತ ವರದಿಯನ್ನು ಹೈಕಮಾಂಡ್ ಗೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗ್ತಿದೆ.
ಓದಿ: Unlock Bengaluru: ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುವ ಆತಂಕ