ಬೆಂಗಳೂರು : ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನ ಚಂದ್ರಶೇಖರ್ ಪಾಟೀಲ್ ಅವರು 'ಚಂಪಾ' ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ, ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ.
-
ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
— Basavaraj S Bommai (@BSBommai) January 10, 2022 " class="align-text-top noRightClick twitterSection" data="
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ...
3/3
">ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
— Basavaraj S Bommai (@BSBommai) January 10, 2022
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ...
3/3ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
— Basavaraj S Bommai (@BSBommai) January 10, 2022
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ...
3/3
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. 'ಸಂಕ್ರಮಣ' ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ವಹಿಸಿದ್ದರು. ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸಂದೇಶದ ಮೂಲಕ ಕೋರಿದ್ದಾರೆ.
ಬಿಎಸ್ವೈ ಸಂತಾಪ:
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
-
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) January 10, 2022 " class="align-text-top noRightClick twitterSection" data="
">ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) January 10, 2022ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) January 10, 2022
ಆರಗ ಜ್ಞಾನೇಂದ್ರ ಸಂತಾಪ:
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದದು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ, ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು ಎಂದು ಸಚಿವರು ಸ್ಮರಿಸಿದ್ದಾರೆ. ಜೊತೆಗೆ ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಕೋರಿದ್ದಾರೆ.
ಕಾರಜೋಳ ಸಂತಾಪ:
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಸಚಿವ ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ.
ನಿರಾಣಿ ಸಂತಾಪ:
ಹಿರಿಯ ಸಾಹಿತಿ, ಬಂಡಾಯಗಾರ, ಕನ್ನಡದ ಅಸ್ಮಿತೆ, ಬರಹ, ಬದುಕು, ನಡೆ, ನುಡಿಯನ್ನು ಒಟ್ಟಿಗೆ ಇಟ್ಟುಕೊಂಡು ಬದುಕು ಸವೆಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಡಾ.ಚಂದ್ರಶೇಖರ ಪಾಟೀಲ್ ಅವರ ಹಠಾತ್ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕಂಬಿನಿ ಮಿಡಿದಿದ್ದಾರೆ.
ಕವಿ, ನಾಟಕಕಾರ, ಸಂಘಟನಾಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರ ಹಠಾತ್ ನಿಧನ ಕನ್ನಡ ನಾಡು ಮತ್ತು ಸಾಹಿತ್ಯ ಹಾಗೂ ಸಂಸ್ಕೃತಿಗೆ ತುಂಬಲಾರದ ನಷ್ಟ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಿ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಿರಾಣಿ ಪತ್ರಿಕಾ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.
ಓದಿ: ಕನ್ನಡದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ್ ನಿಧನ
ಗೋಕಾಕ್ ಚಳವಳಿಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು. ನಾಡು- ನುಡಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದರು. ಚಂದ್ರಶೇಖರ ಪಾಟೀಲರು ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಧಾರವಾಡದಲ್ಲಿದ್ದಾಗಿನಿಂದಲೂ ಕನ್ನಡ ಪರ ಕಾಳಜಿ ವಹಿಸಿ, ಕನ್ನಡ ಪರ ಹೋರಾಟವನ್ನು ನಡೆಸುತ್ತಾ ಬಂದಿದ್ದರು. ಹಲವಾರು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಧಾರವಾಡ ನಾಟಕ ಕೂಟದ ಕಾರ್ಯದರ್ಶಿಯಾಗಿ ಅವರ ಸೇವೆ ಎಂದೆಂದಿಗೂ ಅಜಾರಮರ ಎಂದು ಹೇಳಿದ್ದಾರೆ.
ಅನೇಕ ಜನಪರ ಚಳವಳಿಗಳಲ್ಲೂ ತಮನ್ನು ತೊಡಗಿಸಿಕೊಂಡು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 25 ದಿನ ಜೈಲುವಾಸವನ್ನನುಭವಿಸಿದರು. ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿದ್ದ ಅವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದವುಗಳು ಅಭಿಸಿದ್ದು, 2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 2018 ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಓದಿ: ಹಿಮದಲ್ಲಿ ಮೂಡಿ ಬಂದ ಕನ್ನಡ ಅಕ್ಷರ.. ತನ್ನ ಹುಟ್ಟೂರು ಬಗ್ಗೆ ಪ್ರೀತಿ ತೋರಿದ ವೀರ ಯೋಧ!
ಕನ್ನಡಕ್ಕಾಗಿ ದುಡಿಯುತ್ತಿದ್ದ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತ್ತು. 1996-99ರ ಅವಧಿಗೆ ಈ ಜವಾಬ್ದಾರಿ ನಿರ್ವಹಿಸುವುದರ ಜೊತೆಗೆ 2004-08 ರ ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಕಸಾಪ ಅಧ್ಯಕ್ಷರಾಗಿದ್ದಾಗ ಪರಿಷತ್ತನ್ನು ಪ್ರಬಲ ಹೋರಾಟದ ವೇದಿಕೆಯನ್ನಾಗಿ ರೂಪಿಸಿದ್ದು, ಪುಸ್ತಕ ಮಾರಾಟದ ಮೂಲಕ ಸಣ್ಣ ಪ್ರಮಾಣದ ಪ್ರಕಾಶಕರನ್ನು ಉತ್ತೇಜಿಸಲು ‘ಪುಸ್ತಕ ಸಂತೆ’ಯನ್ನು ಪ್ರತಿ ಶನಿವಾರ ಸಂಜೆ ಏರ್ಪಡಿಸಿದ್ದರ ಜೊತೆಗೆ ಶಿಕ್ಷಣ ಸಮಸ್ಯೆಯನ್ನು ಪರಿಹರಿಸಲು ಉನ್ನತ ಮಟ್ಟದ ಸಮಾಲೋಚನಾ ಸಭೆಯನ್ನು ಏರ್ಪಡಿಸಿದ್ದರು ಎಂದು ಅವರ ಸೇವೆಯನ್ನು ಮುರುಗೇಶ್ ನಿರಾಣಿ ಶ್ಲಾಘಿಸಿದ್ದಾರೆ.
-
ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ. 2/2
— H D Kumaraswamy (@hd_kumaraswamy) January 10, 2022 " class="align-text-top noRightClick twitterSection" data="
">ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ. 2/2
— H D Kumaraswamy (@hd_kumaraswamy) January 10, 2022ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ. 2/2
— H D Kumaraswamy (@hd_kumaraswamy) January 10, 2022
ಹೆಚ್.ಡಿ ಕುಮಾರಸ್ವಾಮಿ ಸಂತಾಪ:
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. 'ಚಂಪಾ' ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.