ETV Bharat / state

ರಾಜ್ಯ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಿ ಮೇಕೆದಾಟು ಯೋಜನೆ ಜಾರಿಗೊಳಿಸಲಿ: ಡಿಸಿಎಂ ಡಿಕೆಶಿ ಸವಾಲು

author img

By ETV Bharat Karnataka Team

Published : Sep 7, 2023, 4:17 PM IST

ಮೇಕೆದಾಟು ಯೋಜನೆಗೆ ಬಜೆಟ್​ನಲ್ಲಿ 1 ಸಾವಿರ ಕೋಟಿ ರೂ. ಇಟ್ಟಿದೆ ಅನುಮತಿ ಕೊಡಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಬಿಜೆಪಿ ನಾಯಕರಿಗೆ ಟಾಂಗ್​ ಕೊಟ್ಟಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್

ಕೇಂದ್ರದ ಮೇಲೆ ಒತ್ತಡ ಹಾಕಿ ಮೇಕೆದಾಟು ಯೋಜನೆ ಜಾರಿಗೊಳಿಸಲಿ

ಬೆಂಗಳೂರು : ಬಿಜೆಪಿ ಸ್ನೇಹಿತರು ಕೆಆರ್​ಎಸ್ ಆಣೆಕಟ್ಟಿಗೆ ಭೇಟಿ ನೀಡುವ ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆ ಜಾರಿಗೊಳ್ಳುವಂತೆ ನೋಡಿಕೊಳ್ಳಲಿ. ಆಗ ಬಿಜೆಪಿಯವರ ನಿಜವಾದ ಬಣ್ಣ ಬಯಲಿಗೆ ಬರುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಂಪುಟ ಉಪ ಸಮಿತಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಮೇಕೆದಾಟು ಪಾದಯಾತ್ರೆ ಮಾಡಿದ ನಂತರ ಮಾಜಿ ಸಿಎಂ ಬವಸರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ 1 ಸಾವಿರ ಕೋಟಿ ಹಣ ಇಟ್ಟಿದ್ದು ಏಕೆ? ಕೇಂದ್ರ ಸರ್ಕಾರದಿಂದ ನಿರಪೇಕ್ಷಣಾ ಪತ್ರ ಏಕೆ ತರಲಿಲ್ಲ? ಮೊದಲು ಈ ಕೆಲಸ ಮಾಡಲಿ, ಆಗ ಬಿಜೆಪಿಯವರ ಹೋರಾಟಕ್ಕೆ ಬೆಲೆ ಬರುತ್ತದೆ ಎಂದರು.

ಕಾವೇರಿ ನೀರಿನ ವಿಚಾರವಾಗಿ ಸರ್ವಪಕ್ಷ ನಿಯೋಗ ಯಾವಾಗ ಕರೆದುಕೊಂಡು ಹೋಗುತ್ತೀರಾ ಎನ್ನುವ ಪ್ರಶ್ನೆಗೆ “ನಾವು ಪ್ರಧಾನಿಯವರ ಭೇಟಿಗೆ ಪತ್ರ ಬರೆದಿದ್ದೇವೆ. ಅವರು ದಿನಾಂಕ ನಿಗದಿ ಮಾಡಿದ ತಕ್ಷಣ ಹೋಗುತ್ತೇವೆ. ಬಿಜೆಪಿಯವರಿಗೆ ಸುದ್ದಿಯಲ್ಲಿ ಇರಬೇಕು ಎನ್ನುವ ಹಂಬಲ ಅದಕ್ಕೆ ಅನಾವಶ್ಯಕ ಹೋರಾಟಗಳನ್ನು ಮಾಡುತ್ತಿದ್ದಾರೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಮಾಡಲಿ. ಕುಡಿಯುವ ನೀರು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಹೇಳಿದರು.

ಭಾರತ ಜೋಡೋ ವಿಚಾರವಾಗಿ ಮಾತನಾಡಿ, ಭಾರತ್ ಜೋಡೋ ಯಾತ್ರೆಗೆ ಇಂದಿಗೆ 1 ವರ್ಷವಾಗುತ್ತಿದೆ. ಇದರ ಸಂಭ್ರಮಾಚರಣೆಯನ್ನು ರಾಮನಗರದಲ್ಲಿ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಚಿವ ಸಂಪುಟ ಸಭೆ ಇರುವ ಕಾರಣ ಜಿಲ್ಲಾ ಮಂತ್ರಿಗಳಿಗೆ ಎರಡು ದಿನ ಕಾಲಾವಕಾಶ ನೀಡಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಕುಮಾರಸ್ವಾಮಿ, ಯೋಗೇಶ್ವರ್ ಒಂದಾಗಿರೋದು ಸಂತೋಷ : ಡಿ.ಕೆ ಸುರೇಶ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಯುತ್ತಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರ ಕ್ಷೇತ್ರದಲ್ಲಿ ಅವರು ಮಾಡಿಕೊಳ್ಳುತ್ತಿದ್ದಾರೆ. ಯಾರನ್ನು ಸೇರಿಸಿಕೊಳ್ಳಬೇಕು ಅನ್ನುವುದೆಲ್ಲ ಅವರಿಗೆ ಬಿಟ್ಟಿದ್ದು. ಸಿ.ಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಇಬ್ಬರೂ ಒಂದಾಗುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಸಂತೋಷವಾಯಿತು ಎಂದರು.

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಹಾಗೂ ಶಿವರಾಮೇಗೌಡ ಅವರು ನಿಮ್ಮನ್ನು ಭೇಟಿ ಮಾಡಿದ ಉದ್ದೇಶ ಏನು ಎಂದು ಮಾದ್ಯಮಗಳು ಕೇಳೆದ ಪ್ರಶ್ನೆಗೆ “ನಾನು ಅದನ್ನು ಹೇಳಲು ಆಗುವುದಿಲ್ಲ. ಅವರ ಒಂದಷ್ಟು ಕೆಲಸ ಕಾರ್ಯಗಳಿಗಾಗಿ ಭೇಟಿ ಮಾಡಲು ಬಂದಿದ್ದರು, ತಪ್ಪೇನಿದೆ? ಎಂದರು. ಇದೇ ವೇಳೆ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಗೋಪಾಲ್ ಪೂಜಾರಿ ಇವರ ನಡುವೆ ಸಂಧಾನ ಮಾಡಿಸಿದ್ದೀರಾ ಎನ್ನುವ ಪ್ರಶ್ನೆಗೆ, ನಾವೆಲ್ಲಾ ಸ್ನೇಹಿತರು. ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದೆವು. ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಅಭಿವೃದ್ದಿಯ ವಿಚಾರ ಮಾತನಾಡಲಾಯಿತು ಎಂದು ಡಿ.ಕೆ ಶಿವಕುಮಾರ್​ ಹೇಳಿದರು.

ಇದನ್ನೂ ಓದಿ : ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ: ಸಚಿವ ಪ್ರಿಯಾಂಕ್ ಖರ್ಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.