ETV Bharat / state

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ: ರೇಸ್‌ನಲ್ಲಿ ಸಿ.ಟಿ.ರವಿ, ಶೋಭಾ ಕರಂದ್ಲಾಜೆ - ಬಿಜೆಪಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್

ರಾಜ್ಯದಲ್ಲಿ ಆಡಳಿತ ಪಕ್ಷರಾಗಿರುವ ಬಿಜೆಪಿ ನಾಯಕತ್ವ ಬದಲಾವಣೆ ಸಾಕಷ್ಟು ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಕಾರಣ ಹಾಲಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್ ಅವಧಿ ಮುಗಿಯುತ್ತಿದೆ ಎನ್ನುವುದು. ಆದರೆ, 2022ಕ್ಕೆ ಮುಗಿಯಲ್ಲ. 2023ಕ್ಕೆ ಅವರ ಅವಧಿ ಮುಗಿಯಲಿದೆ.

ಈಗಲೇ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಮುನ್ನಲೆ

author img

By

Published : Apr 8, 2022, 7:01 PM IST

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಹೆಚ್ಚು ಚರ್ಚೆಯಾಗುತ್ತಿದೆ. ಇಷ್ಟು ದಿನ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿದ್ದ ಚರ್ಚೆ ಈಗ ಆಡಳಿತ ಪಕ್ಷದ ನಾಯಕತ್ವದತ್ತ ತಿರುಗಿದೆ. ಬಿಜೆಪಿ ಹಾಲಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್ ಅವಧಿ ಮುಗಿಯುತ್ತಿದೆ ಎಂಬ ಕಾರಣಕ್ಕೆ ಈ ಚರ್ಚೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಚುನಾವಣಾ ವರ್ಷವಾಗಿರುವ ಕಾರಣ ಪಕ್ಷದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಮೂರ್ನಾಲ್ಕು ಹೆಸರುಗಳೂ ಮುಂದಿನ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ಹೆಸರುಗಳು ಬಿಜೆಪಿ ಪಡಸಾಲೆಯಲ್ಲಿ ಹರಿದಾಡುತ್ತಿವೆ. ಆದರೆ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವರು ಪಕ್ಷದ ಅಧ್ಯಕ್ಷರ ಬದಲಾವಣೆ ಕೇವಲ ವದಂತಿ ಎನ್ನುತ್ತಿದ್ದಾರೆ.

ಸಿ.ಟಿ ರವಿ-ಶೋಭಾ ಏನನ್ನುತ್ತಾರೆ?: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಕ್ಷದ ಕಾರ್ಯಕರ್ತನಾಗಿ ಪಕ್ಷ ಹೇಳುವ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗಿದ್ದ ನನ್ನನ್ನು ಪಕ್ಷ ಸಂಘಟನೆಗೆ ಕರೆಯಿತು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿತು. ಚುನಾವಣೆ ವೇಳೆ ತಮಿಳುನಾಡು, ಕೇರಳ, ಗೋವಾ ಜವಾಬ್ದಾರಿ ವಹಿಸಿತು. ಅದನ್ನು ನಿರ್ವಹಿಸಿದ್ದೇನೆ. ಈಗ ಮತ್ತೆ ಹೊಸ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ ಆದರೆ, ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಪಕ್ಷದ ಮುಂದಿಲ್ಲ ಎಂದಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಪಕ್ಷ ಸಂಘಟನೆಯಲ್ಲಿದ್ದ ತಮಗೆ ಕರೆದು ಕೇಂದ್ರ ಸರ್ಕಾರದಲ್ಲಿ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಸಂಪುಟಕ್ಕೆ ಸೇರಿದ್ದೇನೆ. ಅಷ್ಟು ಬೇಗ ಇದರಲ್ಲಿ ಬದಲಾವಣೆ ಮಾಡಲಾಗುತ್ತದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ ಎನ್ನುತ್ತಾರೆ.

ಅಶೋಕ್​ಗಿಲ್ಲ ಒಲವು: ಕಂದಾಯ ಸಚಿವ ಆರ್.ಅಶೋಕ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಪಕ್ಷದ ಸ್ಥಾನದ ಮೇಲೆ ಅಷ್ಟಾಗಿ ಒಲವು ಹೊಂದಿಲ್ಲ. ಸದ್ಯ ಬೊಮ್ಮಾಯಿ ಸಂಪುಟದಲ್ಲೇ ಮುಂದುವರೆಯುವ ಹಾಗೂ ಬೆಂಗಳೂರು ಉಸ್ತುವಾರಿ ಪಡೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇತ್ತ, ಅಶ್ವತ್ಥನಾರಾಯಣ್ ಸಂಪುಟದಲ್ಲೇ ಮುಂದುವರೆಯುವ ಅಪೇಕ್ಷೆ ಹೊಂದಿದ್ದಾರೆ ಎನ್ನಲಾಗಿದೆ.

ಕಟೀಲ್​ ಅವಧಿ ಮುಗಿಯೋದು ಯಾವಾಗ?: ಪಕ್ಷದ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇಷ್ಟೆಲ್ಲಾ ನಡೆಯುತ್ತಿರುವುದು ಕಟೀಲ್ ಅವಧಿ ಮುಗಿಯುತ್ತಿದೆ ಎನ್ನುವ ಕಾರಣಕ್ಕೆ. ಆದರೆ, 2022ಕ್ಕೆ ಮುಗಿಯಲ್ಲ. 2023ಕ್ಕೆ ಅವರ ಅವಧಿ ಮುಗಿಯಲಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ 2019ರ ಆ.27ರಂದು ಕಟೀಲ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಆದರೆ, ಅದು ಹಂಗಾಮಿ ಮಾತ್ರವಾಗಿತ್ತು. ಅವರು ಮೂರು ವರ್ಷಕ್ಕೆ ಅನ್ವಯವಾಗುವಂತೆ ಪೂರ್ಣ ಪ್ರಮಾಣದಲ್ಲಿ ನೇಮಕವಾಗಿದ್ದು 2020ರ ಜ.16ರಂದು. ಹೀಗಾಗಿ ಅವರ ಅವಧಿ 2023ರ ಜ.16ರವರೆಗೂ ಇದೆ. ಆದ್ದರಿಂದ ಚುನಾವಣೆವರೆಗೂ ಕಟೀಲ್ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ಇದನ್ನೂ ಓದಿ: 'ಬೊಮ್ಮಾಯಿ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಸಿಎಂ ಸ್ಥಾನದಿಂದ ಬದಲಾವಣೆ ಇಲ್ಲ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.