ETV Bharat / state

ಡಿಕೆಶಿಯದ್ದು ‘ಬಗಲ್​ ಮೆ ದುಷ್ಮನ್’ ಪರಿಸ್ಥಿತಿ: ಬಿಜೆಪಿ ವ್ಯಂಗ್ಯ - ಡಿ.ಕೆ.ಶಿವಕುಮಾರ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಬಿರುಸಿನ ಪ್ರಚಾರದ ನಡುವೆ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಬಿಜೆಪಿ ಕಿಚಾಯಿಸಿದೆ.

BJP
Congress
author img

By

Published : Oct 26, 2021, 12:11 PM IST

ಬೆಂಗಳೂರು: ಬೈ ಎಲೆಕ್ಷನ್ ಅಬ್ಬರದ ಪ್ರಚಾರದ ನಡುವೆಯೇ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಇದೀಗ ತಮ್ಮ ಟ್ವಿಟರ್ ಖಾತೆಯಲ್ಲಿ ಕಾಂಗ್ರೆಸ್​ ನಾಯಕರ ಕುರಿತು ಲೇವಡಿ ಮಾಡಿದೆ.

"ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು" ಎಂಬಂತಾಗಿದೆ ರಾಜ್ಯ ಕಾಂಗ್ರೆಸ್ ಸ್ಥಿತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ, ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಡಿಕೆಶಿಯವರದ್ದು ಬರೀ ಕನಸೇ? ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ‌.

ಡಿ.ಕೆ.ಶಿವಕುಮಾರ್ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ನಿಮ್ಮದೀಗ "ಬಗಲ್ ಮೆ ದುಷ್ಮನ್" ಪರಿಸ್ಥಿತಿ, ಅಸಹಾಯಕ ಡಿಕೆಶಿ ಎಂಬ ಹ್ಯಾಶ್ ಟ್ಯಾಗ್​ನೊಂದಿಗೆ ಟ್ವೀಟ್ ಮಾಡಿ ಕೆಪಿಸಿಸಿ ಅಧ್ಯಕ್ಷರ ಕಾಲೆಳೆದಿದೆ.

ಇದನ್ನೂ ಓದಿ: ಹೆಚ್​ಡಿಕೆಯನ್ನು ಸಾಕಿದ್ದು ನಾನೇ.. ಅಲ್ಪಸಂಖ್ಯಾತರನ್ನು ಬಲಿ ಕೊಡುವುದೇ ಕುಮಾರಸ್ವಾಮಿ ಕೆಲಸ: ಜಮೀರ್

ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ ರೂ., ಕಸೂತಿಗೆ 100 ಕೋಟಿ ರೂ., ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ. ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕತೆಯೇನು ಡಿಕೆಶಿಯವರೇ? ಎಂದು ಬಿಜೆಪಿ ಪ್ರಶ್ನಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.