ETV Bharat / state

ರಾಜ್ಯ ಬಜೆಟ್​ 2022-23: ನೀರಾವರಿ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ಕೊಟ್ಟ ಬೊಮ್ಮಾಯಿ - ನೀರಾವರಿ ಕ್ಷೇತ್ರಕ್ಕೆ ಬಂಪರ್​

Karnataka Budget-2022-23.. ಈ ಬಾರಿಯ ಬಜೆಟ್​ನಲ್ಲಿ ನೀರಾವರಿ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ನೀಡಲಾಗಿದ್ದು, ಮೇಕೆದಾಟು ಯೋಜನೆ ಜಾರಿಗೆ 1,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ನೀರಾವರಿ
ನೀರಾವರಿ
author img

By

Published : Mar 4, 2022, 1:58 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್​ನಲ್ಲಿ ನೀರಾವರಿ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ನೀಡಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದ್ದು, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ನೀಡುವುದಾಗಿ ಸರ್ಕಾರ ಘೋಷಿಸಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 3,000 ಕೋಟಿ ರೂ.ಗಳ ಅನುದಾನ ನೀಡಲಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರೂ. ಮತ್ತು ನವಲೆ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1000 ಕೋಟಿ ರೂ. ಅನುದಾನ ನೀಡಲಾಗಿದೆ.

ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ (9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕೆರೆಗಳ ಸಮಗ್ರ ಅಭಿವೃದ್ಧಿಗೆ ಒಟ್ಟು 500 ಕೋಟಿ ರೂ. ಘೋಷಿಸಲಾಗಿದೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಹಣ ನೀಡಲಾಗಿದೆ.

2021-22ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ವಿಸ್ತರಿಸುವಂತೆ ಬೊಮ್ಮಾಯಿ ತಿಳಿಸಿದ್ದಾರೆ.

ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್‌ಲ್ಯಾಂಡ್ ಯೋಜನೆ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಈ ಯೋಜನೆಯನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲಾಗುವುದು.

ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.