ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.5 ರಂದು ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ಚುನಾವಣಾ ರಣತಂತ್ರದ ಬಗ್ಗೆ ನಾಳೆ (ಬುಧವಾರ) ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ವೇಳೆ ಅನರ್ಹ ಶಾಸಕರು, ಚುನಾವಣಾ ಉಸ್ತುವಾರಿಗಳ ಜೊತೆ ಚರ್ಚೆಯಾಗಲಿದೆ.
ಚುನಾವಣೆಯಲ್ಲಿ ಜಯ ಸಾಧಿಸುವ ಹಾಗೂ ಪ್ರಚಾರದ ಬಗ್ಗೆ ಚರ್ಚೆ ನಡೆಯಲಿದೆ. ಎಲ್ಲೆಲ್ಲಿ ಪ್ರಚಾರ ಕೈಗೊಳ್ಳಬೇಕು, ಅನರ್ಹರನ್ನು ಗೆಲ್ಲಿಸಲು ಮಾಡಿಕೊಳ್ಳಬೇಕಾದ ತಂತ್ರಗಳ ಬಗ್ಗೆ ಚರ್ಚಿಸಲಿದ್ದು, ಆರ್ಎಸ್ಎಸ್ ನಾಯಕರು ಕೂಡ ಭಾಗಿಯಾಗುವ ಸಾಧ್ಯತೆ ಇದೆ.