ETV Bharat / state

ಸಂಸದ ರಾಜೀವ್ ಸತವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರಿಂದ ಸಂತಾಪ - ಸಂಸದ ರಾಜೀವ್ ಶತವ್ ನಿಧನ

ಯುವ ನಾಯಕ, ಸಂಸದ ರಾಜೀವ್ ಸತವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

MP Rajeev Satav
ಸಂಸದ ರಾಜೀವ್ ಶತವ್ ನಿಧನ
author img

By

Published : May 16, 2021, 12:53 PM IST

Updated : May 16, 2021, 3:37 PM IST

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಿಡಬ್ಲ್ಯುಸಿ ಸದಸ್ಯರೂ ಆಗಿದ್ದ, ರಾಜ್ಯಸಭೆ ಸದಸ್ಯ ರಾಜೀವ್ ಸತವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ.

ಮಹಾರಾಷ್ಟ್ರದ ಪ್ರಭಾವಿ ನಾಯಕರಾಗಿದ್ದ ರಾಜೀವ್ ಕೋವಿಡ್​​ನಿಂದ ನಿಧನ ಹೊಂದಿರುವ ಸುದ್ದಿ ಆಘಾತಕಾರಿ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಡಾ. ಪುಷ್ಪಾ ಅಮರ್ನಾಥ್, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್ ಮತ್ತಿತರ ನಾಯಕರು ರಾಜೀವ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸಂಸದ ರಾಜೀವ್ ಶತವ್​ ನಿಧನ... ಕಂಬನಿ ಮಿಡಿದ ಕೈ ನಾಯಕರು

Last Updated : May 16, 2021, 3:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.