ETV Bharat / state

ಕೇಂದ್ರ ಸರ್ಕಾರದ ವಿರುದ್ಧ 'ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ' ಅಭಿಯಾನ: ಸಹಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್​ಟ್ಯಾಗ್​ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಅಭಿಯಾನ ಆರಂಭವಾಗಿದೆ. ಏನಿದರ ಉದ್ದೇಶ?

ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನ
ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನ
author img

By ETV Bharat Karnataka Team

Published : Oct 27, 2023, 3:58 PM IST

Updated : Oct 27, 2023, 5:07 PM IST

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಸಲಾಗುವ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನದ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪೋಸ್ಟರ್ ಅ​ನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಾಕುವ ಮೂಲಕ ಕೇಂದ್ರ ಸರ್ಕಾರವನ್ನು ಸಿಎಂ ಪ್ರಶ್ನಿಸಿದ್ದಾರೆ.

ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ.

  • 2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ.
    ಪ್ರಧಾನಿ @narendramodi ಅವರೇ,
    ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ?

    ನಿಮ್ಮ ನೇತೃತ್ವದ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
    ಇದು ನನ್ನ… pic.twitter.com/WmVs5zpHD4

    — Siddaramaiah (@siddaramaiah) October 27, 2023 " class="align-text-top noRightClick twitterSection" data=" ">

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲು ಪ್ರಯತ್ನಿಸಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ. ನಾಡಿನ ರೈತರ ಜೀವನಾಧಾರವಾಗಿರುವ ಕಾವೇರಿ, ಮಹದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಮೊದಲಾದ ನದಿಗಳ ನೀರಾವರಿ ಯೋಜನೆಗಳಿಗೆ ಬೆಂಬಲ ನೀಡದೆ, ಅನ್ನದಾತನನ್ನು ಸಂಕಷ್ಟಕ್ಕೆ ನೂಕಲಾಗಿದೆ. ಕನ್ನಡಿಗರೇ ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದ ಕರ್ನಾಟಕದ ಹೆಮ್ಮೆಯ ವಿಜಯಾ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಕಾರ್ಪೊರೇಷನ್‌ ಬ್ಯಾಂಕ್‌ ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಮೊದಲಾದ ಲಾಭದಲ್ಲಿದ್ದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ.

ಹೀಗೆ ಕರ್ನಾಟಕದ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ‌ ನಡೆಸುತ್ತಿರುವ ಅನ್ಯಾಯದ ಸರಮಾಲೆ ಮುಂದುವರೆದಿದೆ, ನಿರಂತರವಾಗಿ ಸ್ವಾಭಿಮಾನಿ ಕನ್ನಡಿಗರನ್ನು ನಿರ್ಲಕ್ಷಿಸಿ ಅವಮಾನಿಸಲಾಗುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದ ಈ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ವಿರುದ್ಧವಾಗಿರುವುದರಿಂದ ಅದರ ವಿರುದ್ಧ ಧ್ವನಿಯೆತ್ತುವುದು ಅನಿವಾರ್ಯವೆಂದು ಭಾವಿಸಿ, ಇಂದಿನಿಂದ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಹ್ಯಾಷ್‌ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಈ ಅಭಿಯಾನಕ್ಕೆ ಮಾಧ್ಯಮ ಮಿತ್ರರು ಹೆಚ್ಚಿನ ಪ್ರಚಾರ ನೀಡುವ ಮೂಲಕ ನಾಡಿನ ಪರವಾದ ಧ್ವನಿಗೆ ಧ್ವನಿಗೂಡಿಸಬೇಕು.

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ - ದು:ಖಕ್ಕೆಲ್ಲ ಮಿಡಿಯುವ ನಿಮ್ಮ 'ವಿಶಾಲ ಹೃದಯ' ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ?. ನಿಮ್ಮ ನೇತೃತ್ವದ ಭಾರತೀಯ ಜನತಾ ಪಾರ್ಟಿ (BJP) ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?. ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಉತ್ತರ ಕೊಡಿ ಮೋದಿ ಅವರೇ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಈ ಬಾರಿ 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.. 2 ದಿನದಲ್ಲಿ ಪಟ್ಟಿ ಪ್ರಕಟ

Last Updated : Oct 27, 2023, 5:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.