ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ನ 3ನೇ ಅಲೆ ಎಂಟ್ರಿಯಾಗಿದ್ಯಾ..? ಎಂಬ ಅನುಮಾನ ಆರಂಭವಾಗಿದ್ದು, ನಿನ್ನೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ನಡುವೆ ಕೇರಳದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕೊರೊನಾ 3ನೇ ಅಲೆಯನ್ನ ನಿಯಂತ್ರಿಸಲು ಜನರಿಂದಲೇ ಸಾಧ್ಯವಾಗುತ್ತೆ. ಕೋವಿಡ್ ಹರಡದಂತೆ ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ವಚ್ಛತೆ ಕಡೆ ಗಮನಹರಿಸುವುದು ಬಹಳ ಮುಖ್ಯ ಎಂದು ಆರೋಗ್ಯ ಇಲಾಖೆ ಆಯುಕ್ತರು ಹೇಳಿದ್ದಾರೆ.
ಜೊತೆಗೆ ಈಗಾಗಲೇ 3ನೇ ಅಲೆ ಎದುರಿಸಲು ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಜೊತೆಗೆ ಬೇಕಾದ ಔಷಧ ಸಂಗ್ರಹವನ್ನೂ ಮಾಡಲಾಗಿದೆ. ಐಸಿಯು, ಆಕ್ಸಿಜನ್ ಬೆಡ್ ವ್ಯವಸ್ಥೆಯನ್ನ ಮಾಡಲಾಗಿದೆ ಎಂದು ಆಯುಕ್ತರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.