ETV Bharat / state

ಗ್ರಾಮ ಪಂಚಾಯ್ತಿ ಫೈಟ್​: ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಲು ಚುನಾವಣಾ ಆಯೋಗ ಸೂಚನೆ!

ಕೊರೊನಾ ಕಾರಣ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಮುಂದಾಗಿರುವ ರಾಜ್ಯ ಚುನಾವಣಾ ಆಯೋಗ ಇದೀಗ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಲು ಸೂಚನೆ ನೀಡಿದೆ.

grama panchayat election
grama panchayat election
author img

By

Published : Jul 9, 2020, 3:28 AM IST

ಬೆಂಗಳೂರು : ಈಗಾಗಲೇ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

grama panchayat election
ಚುನಾವಣಾ ಆಯೋಗ ಸೂಚನೆ

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಆಯೋಗ, ಜುಲೈ 13 ರಿಂದ 18 ರವರೆಗೆ ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರನ್ನು ಗುರುತಿಸಬೇಕು. ಜುಲೈ 20 ರಿಂದ 29 ರವರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿನ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಗುರುತಿಸಿ, ಆಗಸ್ಟ್ 8 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿದ್ದು, ಆಗಸ್ಟ್ 31 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ ಸುತ್ತೋಲೆಯಲ್ಲಿ ತಿಳಿಸಿದೆ.

grama panchayat election
ಚುನಾವಣಾ ಆಯೋಗ ಸೂಚನೆ

ಲಾಕ್​​ಡೌನ್​​ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಮತದಾರರ ಪಟ್ಟಿ ತಯಾರಿಸುವ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತು. ನ್ಯಾಯಾಲಯದ ಸೂಚನೆ ಮೇರೆಗೆ ಅಕ್ಟೋಬರ್​ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ಆಯೋಗ ಹೈಕೋರ್ಟ್​ಗೆ ತಿಳಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.