ETV Bharat / state

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎತ್ತಂಗಡಿ, ಕೋಲಾರಕ್ಕೆ ವರ್ಗ

Shadakshari Transferred to Kolar: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಸರ್ಕಾರ ಕೋಲಾರಕ್ಕೆ ವರ್ಗಾಯಿಸಿದೆ.

ಷಡಾಕ್ಷರಿ
ಷಡಾಕ್ಷರಿ
author img

By ETV Bharat Karnataka Team

Published : Nov 8, 2023, 12:28 AM IST

Updated : Nov 9, 2023, 12:32 PM IST

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದಾರೆ.

ಆದೇಶ ಪ್ರತಿ
ಆದೇಶ ಪ್ರತಿ

ಶಿವಮೊಗ್ಗದಲ್ಲಿ ಕೆರೆ ಮಣ್ಣು ತೆಗೆದ ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪವೂ ಇತ್ತು. ಇದೀಗ ಸರ್ಕಾರ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿ ಆದೇಶಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಜೊತೆ ಷಡಕ್ಷರಿ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ಗೆ ಪ್ರಯತ್ನಿಸಿದ್ದರು ಎಂದು ಹೇಳಲಾಗಿತ್ತು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಕೂಡಾ ಷಡಕ್ಷರಿ ಶಿವಮೊಗ್ಗದಲ್ಲಿನ ಲೆಕ್ಕಪರಿಶೋಧಕರ ಕಚೇರಿಯಲ್ಲಿ ಅಲಭ್ಯವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.

ಇದು ಸರ್ಕಾರದ ತೀರ್ಮಾನ- ಸಚಿವ ಮಧು ಬಂಗಾರಪ್ಪ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರ ವರ್ಗಾವಣೆ ಸರ್ಕಾರದ ತೀರ್ಮಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೆರೆ ಮಣ್ಣು ತೆಗೆದಿರುವ ಆರೋಪದ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ಸರ್ಕಾರಕ್ಕೆ ತಿಳಿಸಲಾಗಿತ್ತು. ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಷಡಕ್ಷರಿ ಪ್ರತಿಕ್ರಿಯಿಸಿದ್ದು ಹೀಗೆ: ನಾನು ಯಾವುದೇ ಪಕ್ಷದ ಏಜೆಂಟ್ ಅಲ್ಲ, ನಾನು ಸರ್ಕಾರಿ ನೌಕರರ ಪರ ಇರುವ ಏಜೆಂಟ್ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ. ಸರ್ಕಾರ ಇವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಿತ್ತು. ಈ ಕುರಿತು ಕೇಳಿದ ಪ್ರಶ್ನೆಗೆ ಷಡಕ್ಷರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

’’ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷನಾಗಿದ್ದು, 6 ಲಕ್ಷ ನೌಕರರ ಬೇಡಿಕೆ - ಸಮಸ್ಯೆ ಕೇಳುವುದು ನನ್ನ ಕಾಯಕವಾಗಿದೆ. ಆದರೆ ಏಕಾಏಕಿ ಅಧ್ಯಕ್ಷ ಸ್ಥಾನದಲ್ಲಿ ಇರುವವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕೋಲಾರದ ಬದಲು ಬೆಂಗಳೂರಿಗೆ ಡೆಪ್ಯೂಟೇಷನ್ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಷಡಕ್ಷರಿ ಹೇಳಿದ್ದಾರೆ.

ಕೆರೆ ಮಣ್ಣು ತೆಗೆದ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ’’ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಅಧಿಕೃತ ದಾಖಲಾತಿಗಳನ್ನು ತೋರಿಸಲಿ.‌ ಒಂದೊಮ್ಮೆ ತಪ್ಪು ಎಸಗಿರುವುದು ಸಾಬೀತಾದರೆ ಹುದ್ದೆಯನ್ನೇ ತೊರೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನೂ ಭೇಟಿಯಾಗಿ ಮಾತನಾಡುತ್ತೇನೆ‘‘ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ವಂಚಕರ ಬಲೆಗೆ ಬಿದ್ದು ₹72 ಲಕ್ಷ ಪಿಂಚಣಿ ಹಣ ಕಳೆದುಕೊಂಡ ನಿವೃತ್ತ ಪ್ರಾಂಶುಪಾಲೆ

Last Updated : Nov 9, 2023, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.