ಬೆಂಗಳೂರು: ಪೊಲೀಸ್ ಇಲಾಖೆಯ 17 ಮಂದಿ ಡಿವೈಎಸ್ಪಿಗಳಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ್ ಎಸ್. ಸೂಳಿಕೇರಿ, 17 ಮಂದಿ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಮಾಡಿದ್ದಾರೆ.
ಎನ್.ವಾಸುದೇವರಾಯ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಲಾಗಿದೆ. ವಿನಯಕುಮಾರ ಎಂ. ಅವರನ್ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾವೇರಿಗೆ ನೇಮಕ ಮಾಡಲಾಗಿದೆ. ಈ ಮೂಲಕ 17 ಮಂದಿ ಡಿವೈಎಸ್ಪಿಗಳು ವೇತನ ಶ್ರೇಣಿ 70,850ರಿಂದ 1.7 ಲಕ್ಷದವರೆಗಿನ ವೃಂದಕ್ಕೆ ಸೇರ್ಪಡೆಯಾಗಿದ್ದಾರೆ.