ETV Bharat / state

ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ - etv bharat kannada

ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶ ನೀಡಲು ಮತ್ತು ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ವಿಲೇವಾರಿ ಮಾಡುವ ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

state-government-is-making-a-new-program-for-akrama-sakrama-scheme
ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ
author img

By ETV Bharat Karnataka Team

Published : Nov 27, 2023, 10:57 PM IST

ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶ ನೀಡಲು ಮತ್ತು ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ವಿಲೇವಾರಿ ಮಾಡುವ ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಬಗರ್ ಹುಕುಂ ಎಂದರೇನು?: ಈ ಹಿಂದೆ ಅಂದರೆ 1980 ರಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಯಾರ ಬಳಿ ಜಮೀನು ಇರುವುದಿಲ್ಲ ಅಂತಹ ರೈತರಿಗೆ ಸರ್ಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡುವ ವ್ಯವಸ್ಥೆಯನ್ನು ಆಗಿನ ಸರ್ಕಾರ ಜಾರಿ ಮಾಡಿತ್ತು. ಆದರೆ, ಈ ಯೋಜನೆಯನ್ನು ಎಲ್ಲ ಭೂ ರಹಿತ ಕೃಷಿಕರು ತಮ್ಮ ಜೀವನೋಪಾಯಕ್ಕಾಗಿ ತಮಗೆ ಅನುಕೂಲವಾದ ಕಡೆ ಜಮೀನನ್ನು ಉಳುಮೆ ಮಾಡಲು ಪ್ರಾರಂಭಿಸಿದರು. ಆದರೆ ಇವರಿಗೆ ಆ ಭೂಮಿಯ ಹಕ್ಕು ಪತ್ರ ಸಿಕ್ಕಿರಲಿಲ್ಲ. ಹಾಗಾಗಿ, ಇಂತಹ ರೈತರಿಗೆ ತಾವು ಉಳುಮೆ ಮಾಡುತ್ತಿರುವ ಜಮೀನಿನ ಸಾಗುವಳಿ ಚೀಟಿ/ಹಕ್ಕು ಪತ್ರವನ್ನು ನೀಡುವುದಕ್ಕಾಗಿ 1991 ರಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ಭೂ ಕಂದಾಯ ಕಾಯಿದೆ 1964 ಅನ್ವಯ 1991 ರಲ್ಲಿ ನಮೂನೆ 50 ರಲ್ಲಿ ಮತ್ತು 1999 ರಲ್ಲಿ ನಮೂನೆ 53 ರಲ್ಲಿ 2018 ರಲ್ಲಿ ನಮೂನೆ 57 ರಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು.

ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 2023 ರವರೆಗೆ ಅವಕಾಶ ಮಾಡಿಕೊಡಲಾಗಿತ್ತು. ಕಳೆದ 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಈ ಹಿಂದೆ ನಮೂನೆ 50,53 ಮತ್ತು 57 ರಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ವಿಲೇವಾರಿ ಮಾಡಲಾಗುತ್ತಿತ್ತು. ಅಲ್ಲಿ ಅನರ್ಹ ಫಲಾನುಭವಿಗಳಿಗೆ ಅವಕಾಶ ಮತ್ತು ಅಕ್ರಮಗಳಿಗೆ ಅವಕಾಶ ಇರುವ ಕಾರಣದಿಂದಾಗಿ ಈಗ ಈ ಪ್ರಕ್ರಿಯೆಯನ್ನು ಸಂಪೂರ್ಣ ತಂತ್ರಜ್ಞಾನ ಬಳಕೆ ಮಾಡಿ ಸಾಗುವಳಿ ಚೀಟಿ ನೀಡಲು ಸರ್ಕಾರ ಮುಂದಾಗಿದೆ.

ಏನಿದು ತಂತ್ರಜ್ಞಾನ?: ಹದಿನೈದು ವರ್ಷಗಳಿಂದ ಉಳುಮೆ ಮಾಡಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಇಸ್ರೋ ಹಾಗೂ ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ ಸೆಂಟರ್ ಉಪಗ್ರಹ ಆಧಾರಿತ ಚಿತ್ರಗಳನ್ನು ಸಂಗ್ರಹಿಸಿ ಪತ್ತೆ ಮಾಡಲಾಗುತ್ತದೆ. ಇದಕ್ಕಾಗಿ ಹದಿನೈದು ವರ್ಷಗಳ ಚಿತ್ರಗಳನ್ನು ಪಡೆದುಕೊಂಡು ಅನರ್ಹರಿಗೆ ಭೂಮಿ ಹೋಗಬಾರದು ಹಾಗೂ ಅರ್ಹರಿಗೆ ಕೈತಪ್ಪಬಾರದು ಎಂಬ ಕಾರಣಕ್ಕಾಗಿ ಎರಡು ಸಂಸ್ಥೆಗಳ ಸ್ಯಾಟಲೈಟ್ ಚಿತ್ರಗಳನ್ನು ಪಡೆಯಲಾಗುತ್ತದೆ. ಅದರಲ್ಲಿ ಸರ್ವೆ ನಂಬರ್ ಮೂಲಕ ಎಷ್ಟು ವರ್ಷದಿಂದ ಉಳುಮೆ ಮಾಡಲಾಗುತ್ತಿದೆ ಎಂಬುದು ಪತ್ತೆ ಹಚ್ಚಲಾಗುತ್ತದೆ. ಉಪಗ್ರಹದ ಚಿತ್ರಗಳಲ್ಲಿ ಉಳುಮೆಯ ಮಾಹಿತಿ ಲಭ್ಯವಾಗದಿದ್ದಲ್ಲಿ ಅಂತಹ ಅರ್ಜಿಗಳನ್ನು ಮುಲಾಜಿಲ್ಲದೇ ರದ್ದು ಮಾಡಲಾಗುತ್ತದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

ಆರು ತಿಂಗಳಲ್ಲಿ ಎಲ್ಲ ಅರ್ಜಿ ವಿಲೇವಾರಿಗೆ ಕ್ರಮ: ನಮೂನೆಯಲ್ಲಿ ಸಾಗುವಳಿ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಈ ಕಾರಣ ಸಮಿತಿ ಮುಂದೆ ಬಾಕಿ ಇರುವ ಅರ್ಜಿಗಳನ್ನು ಆರು ತಿಂಗಳ ಅವಧಿಯಲ್ಲಿ ವಿಲೇವಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಸಮಿತಿಗಳನ್ನು ರಚನೆ ಮಾಡಲು ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ತಕ್ಷಣಕ್ಕೆ 50 ತಾಲೂಕುಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಅಂತಿಮವಾಗಿದೆ. ಶೀಘ್ರದಲ್ಲಿ ಈ ಆದೇಶ ಹೊರಬೀಳಲಿದೆ. ಉಳಿದ ತಾಲೂಕುಗಳಲ್ಲಿಯೂ ಸಮಿತಿಗಳ ರಚನೆಯಾಗಲಿದೆ. ಆದಷ್ಟು ಶೀಘ್ರ ಮುಗಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ನಲ್ಲಿ ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಆ ಅರ್ಜಿಯನ್ನು ಪರಿಶೀಲಿಸಿದ ನಂತರ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ನಗರದಲ್ಲೂ ಅಕ್ರಮ ಸಕ್ರಮಕ್ಕೆ ಅನುವು: ಅಕ್ರಮ ಸಕ್ರಮ ಯೋಜನೆ ಬೆಂಗಳೂರಿನಲ್ಲಿರುವ ಅಪಾರ್ಟ್​ಮೆಂಟ್​ನ ಫ್ಲಾಟ್​ಗಳ ಮಾಲೀಕರಿಗೆ ದಂಡವನ್ನು ಪಾವತಿಸುವ ಮೂಲಕ ತಮ್ಮ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಅನುವು ಮಾಡಿಕೊಡಲಾಗುತ್ತಿದೆ. ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ವಸತಿಗಳಿಗೂ ಬೇಡಿಕೆ ಹೆಚ್ಚಾಗಿರುವುದರಿಂದ ಕಾನೂನು ಬಾಹಿರ ಕಟ್ಟಡಗಳ ಬೆಳವಣಿಗೆಗೆ ಉತ್ತೇಜನ ನೀಡುತ್ತಿದೆ. ರಿಯಲ್ ಎಸ್ಟೇಟ್ ಕ್ಷೇತ್ರವು ನಿರ್ಮಾಣ ಕಂಪನಿಗಳಿಗೆ ಭಾರಿ ಆದಾಯವನ್ನು ನೀಡುತ್ತದೆ. ಈ ಕಂಪನಿಗಳು ಕಟ್ಟಡಗಳನ್ನು ನಿರ್ಮಿಸಲು ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಬೇಕು.

ಕಟ್ಟಡ ನಿರ್ಮಾಣ ಮಾಡುವವರು, ಪಾವತಿಸಬೇಕಾದ ನೋಂದಣಿ ಶುಲ್ಕವು ವಿವಿಧ ಅಂಶಗಳನ್ನು ಅವಲಂಬಿಸಿದೆ. ನಿರ್ಮಾಣದ ಸ್ಥಳ, ಕಟ್ಟಡದ ಎತ್ತರ ಮತ್ತು ಅಗಲ, ಆಕಾರ (ವಸತಿ ಅಥವಾ ವಾಣಿಜ್ಯ ) ಇವುಗಳನ್ನು ಪರಿಗಣಿಸಲಾಗುತ್ತದೆ. ಆದರೂ, ಆನೇಕ ನಿರ್ಮಾಣ ಕಂಪನಿಗಳು ತಪ್ಪು ವಿವರಗಳನ್ನು ನೀಡಿ ಅಧಿಕೃತ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳುತ್ತವೆ. ಸರ್ಕಾರ ನಿಗದಿಪಡಿಸಿದ ನಿರ್ಮಾಣ ಮಾರ್ಗಸೂಚಿಗಳನ್ನು ಅನುರಿಸಲು ವಿಫಲವಾದರೆ, ನಿರ್ಮಾಣವನ್ನು ಅನಧಿಕೃತವಾಗಿ ಮಾಡುತ್ತದೆ. ದಂಡ ವಿಧಿಸಲು ಅಥವಾ ಕಟ್ಟಡವನ್ನು ಕೆಡವಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಇದಕ್ಕಾಗಿ 2013 ರಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಅಂಗೀಕರಿಸಿದೆ. ಈ ಯೋಜನೆ 2015 ರಿಂದ ಕಾರ್ಯರೂಪಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಸುಮಾರು 2.93 ಲಕ್ಷ ದಷ್ಟು ಅಕ್ರಮ ಕಟ್ಟಡಗಳಿವೆ ಎಂದು ಸ್ಥಳೀಯ ಪ್ರಾಧಿಕಾರ ವರದಿ ನೀಡಿತ್ತು. ಇಡೀ ರಾಜ್ಯದಲ್ಲಿ ಸುಮಾರು 35 ಲಕ್ಷ ಅಕ್ರಮ ಕಟ್ಟಡಗಳಿವೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ಹೊರವಲಯದಲ್ಲಿ ಅಕ್ರಮ ಕಟ್ಟಡಗಳ ಮಾಲೀಕರಿಂದ ದುಪ್ಪಟ್ಟು ತೆರಿಗೆ ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಯೋಜನೆ ಅನುಷ್ಠಾನವು ಶೇ.25 ಅಥವಾ ಅದಕ್ಕಿಂತ ಕಡಿಮೆ ನಿಯಮಗಳನ್ನು ಉಲ್ಲಂಘಿಸಿದ ಕಟ್ಟಡದ ಒಟ್ಟು ಮಾರುಕಟ್ಟೆ ಮೌಲ್ಯ ಮಾಪನದ ಮೇಲೆ ಶೇ.6 ರಷ್ಟು ಏಕರೂಪದ ದಂಡವನ್ನು ವಿಧಿಸಲಾಗುತ್ತದೆ. ನಿರ್ಮಾಣ ಉಲ್ಲಂಘನೆಗಳ ಶೇಕಡಾವಾರು ಪ್ರಮಾಣವು ಶೇ.25 ಕ್ಕಿಂತ ಹೆಚ್ಚು ಆದರೆ ಶೇ.50 ಕ್ಕಿಂತ ಕಡಿಮೆಯಿದ್ದರೆ, ರಾಜ್ಯ ಸರ್ಕಾರವು ಆಸ್ತಿಯ ಪ್ರಸ್ತುತ ಮೌಲ್ಯದ ಶೇ.25 ನಷ್ಟು ದಂಡವನ್ನು ವಿಧಿಸಬಹುದು. ನಗರದ ಪ್ರದೇಶಗಳಲ್ಲಿ ಅರ್ಜಿದಾರರು ಅಥವಾ ಸಂಪರ್ಕದಾರರು 25 ಸಾವಿರ ರೂ. ನಿಂದ 50 ಸಾವಿರ ರೂ. ನೋಂದಣಿ ಶುಲ್ಕವಿದೆ. ಗ್ರಾಮೀಣ ಪ್ರದೇಶದಲ್ಲಿ ಇದೇ ಶುಲ್ಕ ಸಾಮಾನ್ಯ ವರ್ಗದಿಂದ ಬಂದ ವ್ಯಕ್ತಿಗಳಿಗೆ 3 ಸಾವಿರ ರೂ. ಶುಲ್ಕವಿದೆ. ಅರ್ಜಿದಾರರು ಎಸ್​ಟಿ ಅಥವಾ ಎಸ್​ಸಿ ವರ್ಗಕ್ಕೆ ಸೇರಿದವರಾಗಿದ್ದರೆ 1,500 ರೂ. ಶುಲ್ಕವಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ ಎಂದು ಬಿಜೆಪಿ ಸಾಬೀತು ಪಡಿಸಿಲಿ: ಸಿದ್ದರಾಮಯ್ಯ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.