ETV Bharat / state

ಆಡಳಿತ ಇಲಾಖೆಗಳಿಗೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ - ಕೊರೊನ ವೈರಸ್

ಮುಂದುವರೆದ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.

State government
ಆಡಳಿತ ಇಲಾಖೆಗಳಿಗೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ
author img

By

Published : May 4, 2020, 11:24 PM IST

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಜಾರಿಗೊಳಿಸಿದ್ದರಿಂದ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳು ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶಗಳನ್ನು ಹೊರಡಿಸುವಂತಿಲ್ಲ. ಒಂದು ವೇಳೆ ಹೊರಡಿಸಿದ್ದಲ್ಲಿ ಆದೇಶವನ್ನು ಹಿಂಪಡೆಯುವಂತೆ ಎಲ್ಲಾ ಆಡಳಿತ ಇಲಾಖೆಗಳಿಗೆ ಆರ್ಥಿಕ ಇಲಾಖೆ ನಿರ್ದೇಶನ ನೀಡಿತ್ತು.

State government
ಆಡಳಿತ ಇಲಾಖೆಗಳಿಗೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಆದರೆ ಕೆಲವು ಇಲಾಖೆಗಳಲ್ಲಿನ ಮುಂದುವರೆದ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅಗತ್ಯವಾಗಿರುವುದನ್ನು ಅರ್ಥಿಕ ಇಲಾಖೆ ಮನಗಂಡಿದೆ. ಲಾಕ್​ಡೌನ್​ನಿಂದಾಗಿ ರಾಜ್ಯದ ಸಂಪನ್ಮೂಲ ಸಂಗ್ರಹ ಸ್ಥಗಿತವಾಗಿರುವುದರಿಂದ ಹಾಗೂ ಲಾಕ್​ಡೌನ್ ತೆರವುಗೊಳಿಸಿದರೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಕಷ್ಟು ಕಾಲಾವಕಾಶ ಬೇಕಾಗಿರುವುದರಿಂದ ಸರ್ಕಾರವು ವೆಚ್ಚವನ್ನು ಆದ್ಯತೆಗೆ ಅನುಸಾರವಾಗಿ ಮಾಡಬೇಕಾಗುತ್ತದೆ. ಹಾಗಾಗಿ ಎಲ್ಲಾ ಆಡಳಿತ ಇಲಾಖೆಗಳಿಗೂ ಈ ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

1. ಎಲ್ಲಾ ಮುಂದುವರೆದ ಯೋಜನೆಗಳನ್ನು ಅವಶ್ಯಕತೆಗನುಣವಾಗಿ ಅನುಷ್ಠಾನಗೊಳಿಸಬೇಕಾಗಿದ್ದಲ್ಲಿ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯಬೇಕು.

2. ಆಯವ್ಯಯದಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅತ್ಯವಶ್ಯಕವಾಗಿದ್ದಲ್ಲಿ ಸೂಕ್ತ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

3. ಯಾವುದೇ ಹೊಸ ಯೋಜನೆ ಹಾಗೂ ಕಾಮಗಾರಿಗಳಿಗೆ ಅನುಮೋದನೆ ನೀಡುವ ಮೊದಲು ಆರ್ಥಿಕ ಇಲಾಖೆಯ ಅನುಮತಿ ಪಡೆಯಬೇಕು.

4. ಈಗಾಗಲೇ ಅನುಮೋದನೆಗೊಂಡು ಟೆಂಡರ್ ಆಗದಿದ್ದಲ್ಲಿ/ಅನುಮೋದನೆಗೊಂಡು ಟೆಂಡರ್ ಆಗಿ, ವರ್ಕ್ ಆರ್ಡರ್ ನೀಡದಿದ್ದಲ್ಲಿ ಹಾಗೂ ಅನುಮೋದನೆಗೊಂಡು ಟೆಂಡರ್ ಆಗಿ ವರ್ಕ್ ಆರ್ಡರ್ ಸಹ ನೀಡಿದ್ದಲ್ಲಿ ಅಂತಹ ಎಲ್ಲಾ ಕಾಮಗಾರಿಗಳು ಇನ್ನೂ ಕಾರ್ಯಾರಂಭ ಆಗದೆ ಇದ್ದಲ್ಲಿ ಇವುಗಳನ್ನು ಪ್ರಾರಂಭಿಸಲು ಆರ್ಥಿಕ ಇಲಾಖೆಯ ಪೂರ್ವಾನುಮೋದನೆ ಪಡೆಯಬೇಕೆಂದು ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಆದೇಶಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.