ETV Bharat / state

ರಾಜ್ಯ ಸರ್ಕಾರವೂ ಪೆಟ್ರೋಲ್-ಡೀಸೆಲ್ ಮೇಲಿನ ಸುಂಕ ಕಡಿತ ಮಾಡಲಿ : ಬಿಎಸ್‌ಬಿಗೆ ಬಿಎಸ್​ವೈ ಸಲಹೆ - ಬೊಮ್ಮಾಯಿಗೆ ಬಿಎಸ್​ವೈ ಸಲಹೆ

ರಾಜ್ಯದಲ್ಲಿಯೂ ಸುಂಕ ಕಡಿತ ಮಾಡಿದರೆ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ಆ ಕೆಲಸವನ್ನು ಬೊಮ್ಮಾಯಿ ಸರ್ಕಾರ ಮಾಡಬೇಕು ಎಂದು ವಿನಂತಿ ಮಾಡುತ್ತೇನೆ ಎಂದು ಬಿಎಸ್​ವೈ ಹೇಳಿದ್ದಾರೆ..

bs yediyurappa Advice to cm bommai
ಬೊಮ್ಮಾಯಿಗೆ ಬಿಎಸ್​ವೈ ಸಲಹೆ
author img

By

Published : May 22, 2022, 7:23 PM IST

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ ರೀತಿಯಲ್ಲೇ ರಾಜ್ಯ ಸರ್ಕಾರವೂ ಸುಂಕ ಕಡಿತ ಮಾಡಿದಲ್ಲಿ ಜನತೆಗೆ ಹೆಚ್ಚಿನ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಆಲೋಚನೆ ಮಾಡಬೇಕೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯ ಸಂಕಷ್ಟದಲ್ಲಿ ಇಡೀ ದೇಶದ ಜನತೆ ಇದ್ದಾಗ ಬಹಳ ದೊಡ್ಡ ಮನಸ್ಸು ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ್ದಾರೆ.

ರಾಜ್ಯದಲ್ಲಿಯೂ ಸುಂಕ ಕಡಿತ ಮಾಡಿದರೆ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ಆ ಕೆಲಸವನ್ನು ಬೊಮ್ಮಾಯಿ ಸರ್ಕಾರ ಮಾಡಬೇಕು ಎಂದು ವಿನಂತಿ ಮಾಡುತ್ತೇನೆ. ಪ್ರಧಾನಿ ಮೋದಿ ತೆಗೆದುಕೊಂಡಿರುವ ಈ ತೀರ್ಮಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇತ್ತ, ಮುಖ್ಯಮಂತ್ರಿ ಬೊಮ್ಮಾಯಿ ದಾವೋಸ್ ಪ್ರವಾಸಕ್ಕೂ ಮೊದಲು ತೈಲ ಬೆಲೆ ಸುಂಕ ಇಳಿಕೆ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅದರ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ವೈ ಈ ಸಲಹೆ ನೀಡಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯಲ್ಲಿ ಕಡಿತವಾಗುವ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಸುಂಕ ಇಳಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.