ETV Bharat / state

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಏಕ ಸದಸ್ಯ ತನಿಖಾ ಆಯೋಗ ನೇಮಿಸಿ ಸರ್ಕಾರ ಆದೇಶ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏಕ ಸದಸ್ಯ ತನಿಖಾ ಆಯೋಗ ನೇಮಿಸಿ ಆದೇಶ ಹೊರಡಿಸಿದೆ.

judicial inquiry headed by retired justice  PSI recruitment case  PSI recruitment case news  ಪಿಎಸ್‌ಐ ನೇಮಕಾತಿ ಪ್ರಕರಣ  ನ್ಯಾಯಾಂಗ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ  ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವ  ನ್ಯಾಯಾಂಗ ತನಿಖಾ ಆಯೋಗ ನೇಮಕ  545 ಪಿಎಸ್​​​​ಐ ನೇಮಕಾತಿ ಆದೇಶ
ನ್ಯಾಯಾಂಗ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ
author img

By

Published : Jul 21, 2023, 10:51 PM IST

Updated : Jul 22, 2023, 6:29 AM IST

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಮತ್ತೊಂದು ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ತನಿಖೆಗೆ ಒಪ್ಪಿಸಿದೆ. ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಸರ್ಕಾರ ಆದೇಶಿಸಿದೆ.‌ ಕಳೆದ ಬಿಜೆಪಿ ಸರ್ಕಾರದಲ್ಲಿ ಸದ್ದು ಮಾಡಿದ್ದ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರೀ ಸದ್ದು ಮಾಡಿತ್ತು. ಕಾಂಗ್ರೆಸ್ ಇದೇ ವಿಚಾರವಾಗಿ ಬಿಜೆಪಿ ಸರ್ಕಾರ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹೋರಾಟವನ್ನೇ ನಡೆಸಿತ್ತು. ಈ ಅಕ್ರಮವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿತ್ತು. ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜ. 21, 2021ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅ.3, 2021 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ. ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20 ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ನೇಮಕಾತಿ ಡಿಜಿಪಿಯನ್ನು ಜೂ. 20, 2023ರಲ್ಲಿ ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.

545 ಪೊಲೀಸ್ ಸಬ್-ಇನ್ಸ್​ಪೆಕ್ಟರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ‌. ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ ರನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ.

ವಿಚಾರಣಾ ಆಯೋಗ 21.01.2021 ರನ್ವಯ ಜರುಗಿದ 545 ಗಳ ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ? ಎಂದು ತನಿಖೆ ನಡೆಸಬೇಕು. ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ ಅಂತಹ ಉಲ್ಲಂಘನೆ / ಅಕ್ರಮಗಳು ಯಾವುವು ಮತ್ತು ಆ ಅಕ್ರಮಗಳು ಯಾವ ಹಂತದಲ್ಲಿ ಜರುಗಿವೆ? ಎಂದು ತನಿಖೆ ನಡೆಸಬೇಕು. ಅಕ್ರಮಗಳಲ್ಲಿ ಭಾಗಿಗಳಾಗಿ ದುರ್ಲಾಭ ಪಡೆದಿರುವ ವ್ಯಕ್ತಿಗಳು ಯಾರು?.. ಪಿಎಸ್ಐ ಹುದ್ದೆಗೆ ಅಭ್ಯರ್ಥಿಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಲೋಪರಹಿತವಾಗಿ ನಡೆಸುವ ನಿಟ್ಟಿನಲ್ಲಿ ಸರ್ಕಾರವು ಕೈಗೊಳ್ಳಬಹುದಾದ ಕ್ರಮಗಳಾವುವು ಎಂಬುದನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

ಓದಿ: PSI scam : ಆರೋಪ ರಹಿತರ ನೇಮಕ ಕುರಿತು ಮಾಹಿತಿ ನೀಡಲು ಜುಲೈ 5ರ ವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್​

Last Updated : Jul 22, 2023, 6:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.