ETV Bharat / state

ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: 15 ವರ್ಷಕ್ಕಿಂತ ಹಳೆಯ ವಾಹನಗಳಿನ್ನು ಗುಜರಿಗೆ - ರಾಜ್ಯ ಸರ್ಕಾರದ ಆದೇಶ

ಸ್ಕ್ರ್ಯಾಪ್ ನೀತಿ ಅನ್ವಯ ಹಳೆ ವಾಹನ ಗುಜರಿಗೆ ಹಾಕಿರುವ ಪ್ರಮಾಣ ಪತ್ರವನ್ನು ಹೊಸ ವಾಹನ ಖರೀದಿ ವೇಳೆ ತೋರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

state-government-orders-to-implement-the-scrap-policy-of-vehicles
ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: 15 ವರ್ಷಕ್ಕಿಂತ ಹಳೆಯ ವಾಹನಗಳಿನ್ನು ಗುಜರಿಗೆ
author img

By

Published : Aug 4, 2022, 9:30 PM IST

ಬೆಂಗಳೂರು: ರಾಜ್ಯದಲ್ಲೂ ವಾಹನಗಳ ಸ್ಕ್ರ್ಯಾಪ್ ನೀತಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಕ್ರ್ಯಾಪ್ ನೀತಿಯ ಅನುಸಾರ ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ಲಕ್ಷಾಂತರ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕಬೇಕು.

15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ನೀತಿಯನ್ನು ಈಗಾಗಲೇ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. 2021ರಂದು ಸೆ.23ರಂದು ಕೇಂದ್ರ ಸ್ಕ್ರ್ಯಾಪ್ ನೀತಿ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರ ಕೂಡ ಈ ಸ್ಕ್ರ್ಯಾಪ್ ನೀತಿಯನ್ನು ಜಾರಿ ಮಾಡಿದೆ.

ವಾಹನದ ಬಿಡಿಭಾಗಗಳ ಕಂಡಿಷನ್ ಆಧರಿಸಿ ಸರ್ಕಾರವು ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಹಣ ನೀಡುತ್ತದೆ. ಸರ್ಕಾರ ನಿಗದಿ ಪಡಿಸುವ ಹಣ ಹಳೇ ವಾಹನದ ರೀಸೇಲ್ ವ್ಯಾಲ್ಯೂಗಿಂತ ಹೆಚ್ಚಿರಲಿದೆ ಅಥವಾ ಸಮಾನಾಗಿ ಇರಲಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಈ ನೀತಿ ಅನ್ವಯ ಅಧಿಕಾರ ನೀಡಲಾಗಿದೆ.

ಶೇ.5ರಷ್ಟು ರಿಯಾಯಿತಿ: ಈ ನೀತಿಯಲ್ಲಿ ಹೊಸ ವಾಹನ ಖರೀದಿಗೆ ಪ್ರೋತ್ಸಾಹ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಹಳೆ ವಾಹನ ಗುಜರಿಗೆ ಹಾಕಿರುವ ಪ್ರಮಾಣಪತ್ರವನ್ನು ಹೊಸ ವಾಹನ ಖರೀದಿ ವೇಳೆ ತೋರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಳೇ ವಾಹನ ಗಳ ಗುಜರಿ ಮೌಲ್ಯವನ್ನೂ ನಿಗದಿ ಮಾಡಲಾಗಿದೆ. ಹೊಸ ವಾಹನದ ಎಕ್ಸ್‌ ಶೋರೂಂ ದರದ ಶೇ.4ರಿಂದ ಶೇ. 6ರಷ್ಟನ್ನು ಗುಜರಿಗೆ ಹಾಕುವ ವಾಹನಕ್ಕೆ ನೀಡಬೇಕು.

ಈ ನೀತಿಯಂತೆ ನೋಂದಣಿ ಅವಧಿ ಮುಗಿದ ಬಳಿಕ ಎಲ್ಲ ವಾಹನಗಳು ಕಡ್ಡಾಯವಾಗಿ ಫಿಟ್ನೆಸ್‌ ಪರೀಕ್ಷೆಗೆ ಒಳಗಾಗಬೇಕು. ವಾಣಿಜ್ಯ ಬಳಕೆಯ ವಾಹನಗಳು 15 ವರ್ಷ ಪೂರೈಸಿದ ಕೂಡಲೇ ಫಿಟ್ನೆಸ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈಯಕ್ತಿಕ ಬಳಕೆಯ ವಾಹನಗಳಿಗೆ 20 ವರ್ಷ ಪೂರೈಸಿದ ಮೇಲೆ ಫಿಟ್ನೆಸ್‌ ಪರೀಕ್ಷೆ ನಡೆಸಲಾಗುವುದು. ಫಿಟ್ನೆಸ್‌ ಪರೀಕ್ಷೆಯಲ್ಲಿ ಫೇಲ್‌ ಆಗುವ ವಾಹನಗಳನ್ನು ಗುಜರಿಗೆ ಹಾಕಬೇಕಾಗುತ್ತದೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್​ ಕಾರು ತಯಾರಿಸಿ ಜೆಎನ್​ಎನ್​ಸಿಸಿ ಕಾಲೇಜು ವಿದ್ಯಾರ್ಥಿಗಳ ಸಾಧನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.